ಯಮಕನಮರಡಿ: ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿ ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಟ್ಟು ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದೆ ಸತೀಶ ಪ್ರತಿಭಾ ಪುರಸ್ಕಾರದ ಮುಖ್ಯ ಧ್ಯೇಯವಾಗಿದೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಅವರು ರವಿವಾರ ದಿ. 11 ರಂದು ಯಮಕನಮರಡಿಯಲ್ಲಿ ಆಯೋಜಿಸಲಾದ ಸತೀಶ ಶುಗರ್ಸ ಪ್ರಾಯೋಜಕತ್ವದ ಆಶ್ರಯದಲ್ಲಿ ಹಮ್ಮಿಕೊಂಡ 8 ಸತೀಶ ಪ್ರತಿಭಾ ಪುರಸ್ಕಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಕ್ಷೇತ್ರದ ಸವರ್ಾಂಗೀಣ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಜೊತೆಗೆ ಸಾಮಾಜಿಕ ಶೈಕ್ಷಣಿಕ ಕೆಲಸಗಳಿಗೆ ಹೆಚ್ಚು ಒತ್ತುಕೊಟ್ಟು ಹಳ್ಳಿಗಾಡಿನ ಪ್ರತಿಭಾವಂತ ವಿದ್ಯಾಥರ್ಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಕೇವಲ ನಗರ ಪ್ರದೇಶಗಳಲ್ಲಿ ಮಾತ್ರ ನಡೆಯುತ್ತಿದ್ದು, ಗ್ರಾಮೀಣ ಭಾಗದ ಪ್ರತಿಭೆಗಳಿಗಾಗಿ ಸೂಕ್ತ ವೇದಿಕೆಯನ್ನು ಗ್ರಾಮೀಣ ಭಾಗದಲ್ಲಿ ಆಯೋಜಿಸಲಾಗುತ್ತದೆ ಎಂದು ಶಾಸಕ ಸತೀಶ ಹೇಳಿದರು.
ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ ಈ ಬಾರಿಯ ಸತೀಶ ಪ್ರತಿಭಾ ಪುರಸ್ಕಾರಕ್ಕೆ ಬಹುಮಾನ ಮೊತ್ತಗಳನ್ನು ಹೆಚ್ಚಿಸಿ 7 ಲಕ್ಷರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಈ ಸ್ಪಧರ್ೆಯಲ್ಲಿ ಸುಮಾರು 6 ಸಾವಿರ ವಿದ್ಯಾಥರ್ಿಗಳು ಭಾಗವಹಿಸಿದ್ದಾರೆ ಎಂದು ಹೇಳಿದರು. ಸಮಾರಂಭದ ಸಾನಿಧ್ಯವಹಿಸಿದ ಉ ಖಾನಾಪೂರದ ಸಿದ್ಧೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಶಾಸಕ ಸತೀಶ ಜಾರಕಿಹೊಳಿ ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದು, ಈ ಭಾರಿ ಚುನಾವಣೆಯಲ್ಲಿ ಪ್ರಚಾರಕ್ಕೆ ಬಾರದೆ ಗೆಲವು ತನ್ನದಾಗಿಸಿಕೊಂಡಿದ್ದು, ಐತಿಹಾಸಿಕ ದಾಖಲೆಯಾಗಿದೆ. ಅವರು ಶಿಕ್ಷಣ ಕ್ಷೇತ್ರಕ್ಕೆ, ಸಾಂಸ್ಕೃತಿಕ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಆಶೀರ್ವಚನ ನೀಡಿದರು. ಚಿಕ್ಕೋಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಎಂ ಜಿ ದಾಸರ ಮಾತನಾಡಿದರು. ಚಿಕ್ಕೋಡಿ ಅಕ್ಷರ ದಾಸೋಹ ಅಧಿಕಾರಿ ಜಿ ಬಿ ಬಳಿಗಾರ. ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡೀನ, ರಾಹುಲ ಜಾರಕಿಹೊಳಿ, ಎಸ್ ಎ ರಾಮಗಾನಟ್ಟಿ, ರಿಯಾಜ ಚೌಗಲಾ, ಕಾಕತಿ ಜಿ ಪಂ ಸದಸ್ಯ ಸಿದ್ದನಗೌಡಾ ಸುಣಗಾರ, ಮಂಜುನಾಥ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಯಶಸ್ವಿಗೆ ಹುಕ್ಕೇರಿ ತಾ ಪಂ ಅಧ್ಯಕ್ಷ ದಸ್ತಗೀರ ಬಸ್ಸಾಪೂರಿ, ಹತ್ತರಗಿ ಗ್ರಾ ಪಂ ಅಧ್ಯಕ್ಷ ಮಹಾದೇವ ಪಟ್ಟೋಳಿ, ರವೀಂದ್ರ ಜಿಂಡ್ರಾಳಿ, ವೀರಣ್ಣಾ ಬಿಸಿರೊಟ್ಟಿ ಮುಂತಾದವರು ಶ್ರಮಿಸಿದರು. ಶಿಕ್ಷಕ ಎ ಜಿ ಕೋಳಿ, ಆರ್ ಎಲ್ ಮಿಜರ್ಿ ಕಾರ್ಯಕ್ರಮ ನಿರೂಪಿಸಿದರು.