ಇಂಗಳೇಶ್ವರ ಪರಮಪೂಜ್ಯ ಚನ್ನಬಸವ ಮಹಾಸ್ವಾಮಿಗಳು ತೋರಿದ ಮಾರ್ಗ ಸೂರ್ಯ ಚಂದ್ರ ಇರುವವರೆಗೂ ಚಿರಸ್ಥಾಯಿಯಾಗಿರಲಿವೆ
The path shown by Ingaleshwar Paramapujya Channabasava Mahaswamy will remain eternal as long as the
ವಿಜಯಪುರ 12: ಇಂಗಳೇಶ್ವರ ವಿರಕ್ತಮಠದ ಪರಮಪೂಜ್ಯ ಚನ್ನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾದರೂ ಅವರು ನಿರ್ಮಿಸಿರುವ ವಚನಶಿಲಾ ಮಂಟಪ ಮತ್ತು ಹಾಕಿಕೊಟ್ಟಿರುವ ಮಾರ್ಗ ಸೂರ್ಯ ಚಂದ್ರ ಇರುವವರೆಗೂ ಚಿರಸ್ಥಾಯಿಯಾಗಿರಲಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ. ಇಂದು ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಲಿಂ. ಚನ್ನಬಸವ ಮಹಾಸ್ವಾಮಿಗಳ ಅಂತಿಮ ದರ್ಶನ ಪಡೆದ ಅವರು ಭಕ್ತಿಪೂರ್ವಕ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ನುಡಿನಮನ ಸಲ್ಲಿಸಿದರು.ಶ್ರೀಗಳನ್ನು ಕಳೆದುಕೊಂಡು ನಾವು ಬಡವರಾಗಿದ್ದೇವೆ.
ಬಸವಣ್ಣನವರ ಜನ್ಮಭೂಮಿಯಲ್ಲಿ ಬಸವಾದಿ ಶರಣರ ಸಾಹಿತ್ಯ, ವಚನಗಳು ಹಾಗೂ ತತ್ವ ಸಿದ್ಧಾಂತಕ್ಕೆ ತಕ್ಕಂತೆ ನಡೆದುಕೊಂಡಿದ್ದಾರೆ. ಅಲ್ಲದೇ, ಅವರ ತತ್ವಗಳ ಪ್ರಸಾರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಯಾರ ನೆರವನ್ನೂ ಪಡೆಯದೆ ಕಷ್ಟಪಟ್ಟು, ಶ್ರಮವಹಿಸಿ, ವಚನಶಿಲಾ ಮಂಟಪ ನಿರ್ಮಿಸಿದ್ದಾರೆ. 12ನೇ ಶತಮಾನದಲ್ಲಿ ಅನುಭವ ಮಂಟಪದ ಬಸವಾದಿ ಶರಣರ ವಚನ ಸಾಹಿತ್ಯವನ್ನು ಶಿಲಾ ಮಂಟಪದ ಮೂಲಕ ಮುಂದಿನ ಪೀಳಿಗೆಗೆ ಶಾಶ್ವತವಾಗಿ ಉಳಿಸುವ ಅಮೂಲ್ಯ ಕಾರ್ಯ ಮಾಡಿದ್ದಾರೆ. ಸರಳ ಜೀವಿಯಾಗಿದ್ದ ಅವರು ತಾಯಿ ಹೃದಯ ಹೊಂದಿದ್ದರು. ಅವರು ಶತಯುಷಿಗಳಾಗಬೇಕು ಎಂಬುದು ಭಕ್ತರ ಆಶಯವಾಗಿತ್ತು ಎಂದು ಅವರು ಹೇಳಿದರು.
ಬಸವಾದಿ ಶರಣರ ಸಾಲಿನಲ್ಲಿ ಶ್ರೀಗಳು ಕೂಡ ಒಬ್ಬರಾಗಿದ್ದಾರೆ. ಈಗಿನ ಕಿರಿಯ ಶ್ರೀಗಳು ಹಿರಿಯ ಶ್ರೀಗಳ ಮಾರ್ಗ ಅನುಸರಿಸಲಿ. ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರ ಬಸವ ಸಾಹಿತ್ಯ ಪ್ರಸಾರಕ್ಕೆ ಸಹಕರಿಸಲಿದೆ. ಸಿ.ಎಂ ಕೂಡ ಶ್ರೀಗಳ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಸರಕಾರದ ಪರವಾಗಿ ಶ್ರೀಗಳಿಗೆ ಗೌರವ ನಮನಗಳನ್ನು ಸಲ್ಲಿಸುತ್ತೇನೆ. ಅವರ ಕೊಡುಗೆ ಅಪಾರ. ದೇವರು ಮತ್ತು ಬಸವಾದಿ ಶರಣರು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ. ಅವರು ದೈಹಿಕವಾಗಿ ನಮ್ಮೊಂದಿಗೆ ಇರದಿದ್ದರೂ ಶಿಲಾಮಂಟಪ ರೂಪದಲ್ಲಿ ನೆಲೆಸಿದ್ದಾರೆ. ಭಕ್ತರೆಲ್ಲರೂ ಅವರು ಹಾಕಿಕೊಟ್ಟಿರುವ ಸನ್ಮಾರ್ಗದಲ್ಲಿ ನಡೆಯೋಣ ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಸಚಿವ ಶಿವಾನಂದ ಪಾಟೀಲ, ಕೆ.ಎಸ್.ಡಿ.ಎಲ್. ಮತ್ತು ಶಾಸಕ ಸಿ.ಎಸ್.ನಾಡಗೌಡ, ಶಾಸಕ ರಾಜುಗೌಡ ಪಾಟೀಲ, ಬಸವನ ಬಾಗೇವಾಡಿ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ, ಮನಗೂಳಿ ಹಿರೇಮಠದ ಸಂಗನಬಸವ ಶಿವಾಚಾರ್ಯರು, ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ, ಇಂಗಳೇಶ್ವರ ವಿರಕ್ತಮಠದ ಸಿದ್ಧಲಿಂಗ , ಹುಬ್ಬಳ್ಳಿ ಮೂರು ಸಾವಿರ ಮಠದ ಧಾರವಾಡ ಮುರುಘಾಮಠ , ನಿಜಗುಣಾನಂದ ಸ್ವಾಮೀಜಿ, ನಿಡಸೊಸಿ , ಜ್ಞಾನಯೋಗಾಶ್ರಮದ ಬಸವಲಿಂಗ , ಯರನಾಳ ಸೇರಿದಂತೆ ನಾಡಿನ ನಾನಾ ಭಾಗಗಳಿಂದ ಆಗಮಿಸಿದ್ದ ಅಪಾರ ಭಕ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 