ವ್ಯಕ್ತಿ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ 22:ನಗರದ ಕೌಲ್ಬಜಾರ್ನ ನಲ್ಲಚೇರುವು ಪ್ರದೇಶದ ಬಟ್ಟಿ ಏರಿಯಾದ ನಿವಾಸಿ ವಿರೇಶ್ ಬಾಬು ಎನ್ನುವ 29 ವರ್ಷದ ವ್ಯಕ್ತಿ ಜ.12 ರಂದು ಕಾಣೆಯಾಗಿರುವ ಕುರಿತು ಕೌಲ್ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ ಗುರುತು: ಅಂದಾಜು 5.6 ಅಡಿ ಎತ್ತರ, ದೃಢವಾದ ಮೈಕಟ್ಟು, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಎಡಗೈ ತೋಳಿನ ಮೇಲೆ ಗರುಡ ಹಚ್ಚೆ ಹಾಕಿಸಿಕೊಂಡಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಪಾಚಿ ಬಣ್ಣದ ಚೆಕ್ಸ್ ಅಂಗಿ, ಕ್ರೀಮ್ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, ಪಿಐ ಮೊ.9480803047, ಪಿಎಸ್ಐ ಮೊ.9480803085 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.