ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಕಳಪೆ ಮತ್ತು ದಿವಾಳಿ ಬಜೆಟ್ : ಭರತ
The poorest and most bankrupt budget in Karnataka's history: Bharat
ಶಿಗ್ಗಾವಿ 07 : ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಆರ್ಥಿಕತೆಯನ್ನು ಸಂಪೂರ್ಣವಾಗಿ ಹಳಿ ತಪ್ಪಿಸಿದೆ. ಈ ಬಾರಿಯ ಬಜೆಟ್‌ನಲ್ಲಿ ?1,32,000 ಕೋಟಿ ಸಾಲದ ಹೊರೆ ಹೊರಿಸಲಾಗಿದ್ದು, ರಾಜ್ಯದ ಒಟ್ಟು ಹೊಣೆಗಾರಿಕೆ ?8.24 ಲಕ್ಷ ಕೋಟಿ ದಾಟಿದೆ. ಪ್ರತಿ ಕನ್ನಡಿಗನ ತಲೆಯ ಮೇಲೆ ಇಂದು ?1.17 ಲಕ್ಷ ಸಾಲದ ಪರ್ವತವಿದೆ ಎಂದು ಭಾಜಪ ಮುಖಂಡ ಭರತ ಬೊಮ್ಮಾಯಿ ಹೇಳಿದರು. ಪಟ್ಟಣದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ ಆರ್ಥಿಕ ವೈಫಲ್ಯದ ಮುಖ್ಯಾಂಶಗಳು.?1,32,000 ಕೋಟಿ ಸಾಲ: ಅಭಿವೃದ್ಧಿಯ ಹೆಸರಿನಲ್ಲಿ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಲಾಗುತ್ತಿದೆ. ?32,000 ಕೋಟಿ ರಾಜಸ್ವ ಕೊರತೆ ಆದಾಯಕ್ಕಿಂತ ಖರ್ಚೇ ಜಾಸ್ತಿ ಮಾಡಿ ಬಜೆಟ್ ಅನ್ನು ದಿವಾಳಿ ಮಾಡಲಾಗಿದೆ.?25,000 ಕೋಟಿ ಹೆಚ್ಚುವರಿ ತೆರಿಗೆ ಹೊರೆ: ಜನರ ಜೇಬಿಗೆ ಕತ್ತರಿ ಹಾಕಿ ಹೊಸ ತೆರಿಗೆಗಳ ಮೂಲಕ ?25,000 ಕೋಟಿ ವಸೂಲಿ ಮಾಡಲು ಯೋಜನೆ ಹಾಕಲಾಗಿದೆ. ತಮ್ಮನ್ನು ಆರ್ಥಿಕ ತಜ್ಞ ಎಂದು ಕರೆದುಕೊಳ್ಳುವ ಮುಖ್ಯಮಂತ್ರಿಗಳ ಅಸಮರ್ಥ ಆಡಳಿತದಿಂದಾಗಿ, ಭಾರತದ ಬೆಳವಣಿಗೆಯ ಇಂಜಿನ್ ಆಗಿದ್ದ ಕರ್ನಾಟಕ ಇಂದು 10 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ಸಾಲ ಮಾಡುವುದರಲ್ಲಿ ನಿಸ್ಸೀಮರಾಗಿರುವ ಸಾಲರಾಮಯ್ಯ ಅವರ ಬಜೆಟ್ ರಾಜ್ಯದ ಭವಿಷ್ಯಕ್ಕೆ ಮಾರಕ. ಇದು ಅಭಿವೃದ್ಧಿಯ ಬಜೆಟ್ ಅಲ್ಲ, ಕರ್ನಾಟಕದ ವಿನಾಶದ ಹಾದಿ ಎಂದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 