ಪತ್ರಿಕಾರಂಗ ತನ್ನದೇ ಆದ ವಿಶಿಷ್ಟ ಸ್ಥಾನ ಹೊಂದಿದೆ: ಮಾಜಿ ಜಿಪಂ ಅಧ್ಯಕ್ಷ ಬಸನಗೌಡ ಪಾಟೀಲ
The press has its own unique position: Former Zilla Parishad President Basanagouda Patil
ದೇವರಹಿಪ್ಪರಗಿ 31: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗ. ನ್ಯಾಯಾಂಗ. ಶಾಸಕಾಂಗ ಜೊತೆ ನಾಲ್ಕನೇ ಅಂಗವಾಗಿ ಪತ್ರಿಕಾರಂಗ ತನ್ನದೇ ಆದಂತ ವಿಶಿಷ್ಟ ಸ್ಥಾನವನ್ನು ಹೊಂದಿದ್ದು. ಆಡಳಿತಗಾರರು ಹಾಗೂ ರಾಜಕಾರಣಿಗಳು ತಮ್ಮ ಕೆಲಸ ಕಾರ್ಯಗಳಲ್ಲಿ ತಪ್ಪಿನಡೆದರೆ ತಿದ್ದುವ ಕೆಲಸವನ್ನು ಪತ್ರಿಕಾರಂಗವು ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಬಿಜೆಪಿ ಮುಖಂಡರು ಹಾಗೂ ಯಾದಗಿರಿ ಮಾಜಿ ಜಿಪಂ ಅಧ್ಯಕ್ಷ ಬಸನಗೌಡ ಪಾಟೀಲ(ಯಡೇಪುರ) ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರದಂದು ಹಮ್ಮಿಕೊಂಡಿದ್ದ ನೂತನವಾಗಿ ಆಯ್ಕೆಯಾದ ತಾಲೂಕು ಕಾನಿಪ ಪದಾಧಿಕಾರಿಗಳಿಗೆ ಸನ್ಮಾನಿಸಿ ಶುಭ ಹಾರೈಸಿ ಮಾತನಾಡಿದರು. ಸಮಾಜದ ಅಭಿವೃದ್ಧಿಯಲ್ಲಿ ಪತ್ರಿಕೆಗಳ ಪಾತ್ರ ದೊಡ್ಡದು. ಈ ಭಾಗದ ಅಭಿವೃದ್ಧಿಯಲ್ಲಿ, ಬೆಳವಣಿಗೆಯಲ್ಲಿ, ಸಾರ್ವಜನಿಕ ಹಾಗೂ ವೈಯಕ್ತಿಕ ಸಮಸ್ಯೆ ಬಗೆಹರಿಸುವಲ್ಲಿ ಮಾಧ್ಯಮಗಳ ಕಾಳಜಿ ದೊಡ್ಡದು ಹಾಗೂ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಲು ನಾನು ಸದಾ ಸಿದ್ಧ ಎಂದು ಹೇಳಿದರು.ಪ್ರಾಸ್ತಾವಿಕವಾಗಿ ಬಿಜೆಪಿ ಮುಖಂಡರುಗಳಾದ ಸಿದ್ದು ಬುಳ್ಳಾ, ಪ್ರಕಾಶ ದೊಡಮನಿ ಅವರು ಮಾತನಾಡಿ ಮಾಜಿ ಜಿಪಂ ಅಧ್ಯಕ್ಷ ಬಸನಗೌಡ ಪಾಟೀಲ(ಯಡೇಪೂರ)
ಅವರು ಈ ಭಾಗದಲ್ಲಿ ಎಲ್ಲಾ ಜನರನ್ನು ನಮ್ಮವರು ಎಂದು ಜಾತಿ ಭೇದ ಭಾವ ಇಲ್ಲದೆ ಸಾಮಾಜಿಕವಾಗಿ, ಆರ್ಥಿಕವಾಗಿ, ಹಿಂದುಳಿದ ವರ್ಗಗಳ ಜನರಿಗೆ ಸಹಾಯ ಸಹಕಾರ ನೀಡುತ್ತಾ ಬಂದಿದ್ದಾರೆ. ಬರುವಂಥ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆಯನ್ನು ಅವರಿಂದ ಕ್ಷೇತ್ರಕ್ಕೆ ಸಿಗಲಿ ಎಂದು ಶುಭ ಹಾರೈಸಿದರು. ಸಂದರ್ಭದಲ್ಲಿ ಕಾನಿಪ ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳನ್ನು ಆತ್ಮೀಯವಾಗಿ ಸನ್ಮಾನಿಸಿ, ಅಭಿನಂದಿಸಿದರು.ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಕೆ. ಶ್ರೀನಿವಾಸರಾವ್, ಯಮನೂರಿ ಕುಲಕರ್ಣಿ, ಗುರುನಾಥ ಮುರಡಿ, ಶರಣು ಪೂಜಾರಿ, ಸುನಿಲ್ ಮಾಗಿ, ಅಶೋಕ ಗೊಲ್ಲರ ಸೇರಿದಂತೆ ಹಲವಾರು ಜನ ಮುಖಂಡರು, ಪತ್ರಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 