ಅಧಿವೇಶನದಲ್ಲಿ ಸ್ಲಂ ಜನರ ಸಮಸ್ಯೆಗಳ ಮೇಲೆ ಚರ್ಚಿಸಲಾಗುವುದು : ಪ್ರಸಾದ ಅಬ್ಬಯ್ಯ
The problem of slum people will be discussed in the session : Prasada Abbayya
ಅಧಿವೇಶನದಲ್ಲಿ ಸ್ಲಂ ಜನರ ಸಮಸ್ಯೆಗಳ ಮೇಲೆ ಚರ್ಚಿಸಲಾಗುವುದು : ಪ್ರಸಾದ ಅಬ್ಬಯ್ಯ
ಗದಗ-16, ರಾಜ್ಯದ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ನೋಂದಣೆಗೊಳಿಸಿ ಇ-ಖಾತಾ ವಿತರಸಲು, ರಾಜ್ಯದ ಸ್ಲಂ ನಿವಾಸಿಗಳ ಜನಸಂಖ್ಯೆ ಅನುಗುಣವಾಗಿ ರಾಜ್ಯ ಸರ್ಕಾರದ ಮುಂದಿನ 2025-2026 ಸಾಲಿನ ಬಜೇಟನಲ್ಲಿ ಅನುದಾನವನ್ನು ಮೀಸಲಿಡಲು, ರಾಜ್ಯದ ಖಾಸಗಿ ಭೂ-ಮಾಲಿಕತ್ವದಲ್ಲಿರುವ ಕೊಳಗೇರಿ ಪ್ರದೇಶಗಳನ್ನು ಸ್ಲಂ ಕಾಯ್ದೆ ಪ್ರಕಾರ ಘೋಷಣೆ ಮಾಡಿ ಸ್ಥಳೀಯ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹಾಗೂ ಇನ್ನು ಹಲುವಾರು ಬೇಡಿಕೆಗಳಿಗೆ ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಸಾವಿರಾರು ಸ್ಲಂ ನಿವಾಸಿಗಳಿಂದ ಬೆಳಗಾವಿಯ ಸುವರ್ಣ ಸೌಧದ ಮುಂದೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗಿದೆ, ರಾಜ್ಯ ಸರ್ಕಾರದ ಪರವಾಗಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಕರ್ನಾಟಕ ಕೊಳಗೆರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಮಾತನಾಡಿ ರಾಜ್ಯದಲ್ಲಿ ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಪ್ರಸ್ತುತ ಬಜೆಟ್ ನಲ್ಲಿ ಹಣ ಮೀಸಲಿಡುವುದು ಸೇರಿದಂತೆ ಸ್ಲಂ ಕಾಯ್ದೆಗೆ ವಿರುದ್ಧವಾಗಿರುವ ವಸತಿ ಇಲಾಖೆ ಸುತ್ತೋಲೆ ವಾಪಾಸಾತಿ ಹಾಗೂ ಲ್ಯಾಂಡ್ ಬ್ಯಾಂಕ್ ನೀತಿ ಕುರಿತಂತೆ ಪ್ರಸ್ತುತ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ಮಾಡಲು ಈಗಾಗಲೇ ಸಮಯ ನಿಗದಿಯಾಗಿದೆ, ಅದರಂತೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸ್ಲಂ ಜನರಿಗೆ ಹಕ್ಕುಪತ್ರ ವಿತರಣೆ ನೊಂದಣಿ ಮತ್ತು ಇ-ಖಾತಾ ಪ್ರಕ್ರಿಯೆಯನ್ನು ಸರಗೊಳಿಸಿ ಖಾಸಗಿ ಸ್ಲಂಗಳ ಅಭಿವೃದ್ಧಿಗೂ ಮುಂದಾಗುವ ಜೊತೆಗೆ ಪ್ರಧಾನ ಮಂತ್ರಿ ಅವಾಸ್ ಯೋಜನೆ ಅಡಿಯಲ್ಲಿ ನಿರ್ಮಿಸುತ್ತಿರುವ ವಸತಿ ಯೋಜನೆಯನ್ನು ಪೂರ್ಣಗೊಳಿಸಲು ಹಣ ಮಂಜೂರಾತಿ ಸೇರಿದಂತೆ ಸ್ಲಂ ಜನರ ಪರವಾದ ಕಾನೂನ ಮತ್ತು ನೀತಿಗಳನ್ನು ಜಾರಿಗೆ ತರಲು ಮುಖ್ಯಮಂತ್ರಿ ಮತ್ತು ವಸತಿ ಸಚಿವರ ಬೆಂಬಲದೊಂದಿಗೆ ಮಾಡಲಾಗುವುದೆಂದು ಭರವಸೆ ನೀಡಿದರು. ಕರ್ನಾಟಕ ಕೊಳಗೇರಿ ಅಭಿವೃಧ್ದಿ ಮಂಡಳಿಯ ಆಯುಕ್ತರಾದ ಅಶೋಕ ಡಿ.ಆರ್ ಮಾತನಾಡಿ ಈಗಾಗಲೀ ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೊಂದಣಿಗೆ ಇ-ಖಾತಾ ತೊಡಕಾಗಿರುವ ಬಗ್ಗೆ ಮುಂದ್ರಾಕ ಇಲಾಖೆ ಎಐಜಿ ಅವರೊಂದಿಗೆ ಸಭೆ ನಡೆಸಿ 94ಸಿಸಿ ಮಾದರಿಯಲ್ಲಿ ನೊಂದಣಿ ಮಾಡಿಕೊಡಲು ಒಪ್ಪಿಸಲಾಗಿದೆ.
ಹಾಗೆ ಇದುವರೆಗೂ 1.8 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ನೀಡಲಾಗಿದೆ, ತೊರಿತವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಬಾಕಿ ಇರುವ ಮನೆಗಳನ್ನು ಪೂರ್ಣಗೊಳಿಸಿ ಹಸ್ತಾಂತರಿಸಲಾಗುವುದು ಖಾಸಗಿ ಮಾಲೀಕತ್ವದ ಘೋಷಣೆಗೆ ಯಾವುದೇ ರೀತಿಯ ತೊಡಕಿಲ್ಲ, ಈಗಾಗಲೇ ಹಣಕಾಸು ಇಲಾಖೆ ಸ್ಲಂಗಳ ಘೋಷಣೆ ಆಡಳಿತಾತ್ಮಕ ವಿಚಾರವೆಂದು ಸೃಷ್ಟೀಕರಣ ನೀಡಿರುವುದರಿಂದ ಉತ್ತರ ಕರ್ನಾಟಕ ಭಾಗದ ಸ್ಲಂ ನಿವಾಸಿಗಳಿಗೆ ವಸತಿ ಇಲಾಖೆ ಸುತ್ತೋಲೆ ತೊಡಕಾಗಿದ್ದು, ಎಲ್ಲಾ ವಿಭಾಗಗಳಿಂದ ಬಾಕಿ ಇರುವ ಸರ್ಕಾರಿ ಮತ್ತು ಖಾಸಗಿ ಕೊಳಚೆ ಪ್ರದೇಶಗಳ ಘೋಷಣೆಗೆ ಕ್ರಮವಹಿಸಲು ಸ್ಪಷ್ಟ ಸೂಚನೆ ನೀಡಲಾಗುವುದೆಂದು ಹೇಳಿದರು, ಸ್ಲಂ ಘೋಷಣೆ ಹಾಗೂ ವಸತಿ ಯೋಜನೆಯಲ್ಲಿ ವಿನಾಕಾರಣ ನಿರ್ಲಕ್ಷ್ಯ ಮತ್ತು ವಿಳಂಭಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಸೊಕ್ತ ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದರು,
ಸ್ಲಂ ಜನಾದೋಲನ-ಕರ್ನಾಟಕ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ, ರಾಜ್ಯ ಸಂಚಾಲಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷರಾದ ಇಮ್ತಿಯಾಜ.ಆರ್.ಮಾನ್ವಿ, ವಿಭಾಗೀಯ ಸಂಚಾಲಕರಾದ ಜನಾರ್ಧನ ಹಳ್ಳಿಬೆಂಚಿ, ಚಂದ್ರಮ್ಮ, ಶೋಭಾ ಕಮತರ, ಫಕ್ಕಿರ್ಪ ತಳವಾರ, ವೆಂಕಮ್ಮ, ರೇಣುಕಾ ಸರಡಗಿ, ರೇಣುಕಾ ಡಾವಣಗೇರಿ, ಅಕ್ರಮ ಮಸಾಳಕರ, ಅರುಣ ತುಮಕೂರ, ಗದಗ ಜಿಲ್ಲಾ ಸ್ಲಂ ಸಮಿತಿ ಉಪಾಧ್ಯಕ್ಷ ರವಿಕುಮಾರ ಬೆಳಮಕರ, ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮೆಹಬೂಬಸಾಬ ಬಳ್ಳಾರಿ, ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಖಾಜಾಸಾಬ ಇಸ್ಮಾಯಿಲನವರ, ರಿಜ್ವಾನ ಮುಲ್ಲಾ, ಮಂಜುನಾಥ ಶ್ರೀಗಿರಿ, ಮೆಹರುನಿಸಾ ಡಂಬಳ, ಮಕ್ತುಮಸಾಬ ಮುಲ್ಲಾನವರ, ಬಾಷಾಸಾಬ ಡಂಬಳ, ಸಲೀಮ ಹರಿಹರ ಹಾಗೂ ವಿವಿಧ ಜಿಲ್ಲೆಗಳ ಸಾವಿರಾರು ಸ್ಲಂ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 