ನಾವದಗಿ ಶ್ರೀಗಳ ಧರ್ಮ ಜಾಗೃತಿ ಕಾರ್ಯ ಶ್ಲಾಘನೀಯ: ಶಿವಯೋಗಿ
The religious awareness work of the Navadagi saints is commendable: Shivayogi
ತಾಳಿಕೋಟಿ 11: ಗುರು ಪಟ್ಟಾಧಿಕಾರ ಐತಿಹಾಸಿಕ ಕಾರ್ಯಕ್ರಮದ ಮೂಲಕ ಈ ಭಾಗದಲ್ಲಿ ಧರ್ಮ ಜಾಗೃತಿಯನ್ನು ಮೂಡಿಸಿ ಭಕ್ತರ ಆಧ್ಯಾತ್ಮಿಕ ಸಂಸ್ಕರಣೆ ಮಾಡುತ್ತಿರುವ ನಾವದಗಿ ಪೂಜ್ಯರ ಧರ್ಮ ಸೇವೆ ಶ್ಲಾಘನೀಯವಾದದ್ದು ಎಂದು ದೇವರ ಹಿಪ್ಪರಗಿ ಪರದೇಶಿ ಮಠದ ಪೂಜ್ಯ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ನಾವದಗಿ ಗ್ರಾಮದ ಶ್ರೀ ಪರ್ವತೇಶ್ವರ ಬ್ರಹನ್ಮಠದ 108 ರಾಜ ಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರ ಗುರು ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡ" ಗುಡ್ಡಾಪುರದ ದಾನಮ್ಮ ದೇವಿ ಪುರಾಣ" ಆರಂಭೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಕಲಕೇರಿ ಹಿರೇಮಠದ ಸಿದ್ದರಾಮ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಇಂದಿನ ಯಾಂತ್ರಿಕ ಯುಗದಲ್ಲಿ ಮನುಷ್ಯ ಒತ್ತಡದ ಬದುಕಿನಿಂದಾಗಿ ಮಾನಸಿಕ ನೆಮ್ಮದಿ ಕಳೆದುಕೊಂಡಿದ್ದಾನೆ ಇಂಥ ಪುರಾಣ ಪ್ರವಚನಗಳನ್ನು ಆಲಿಸುವುದರಿಂದ ಮಾನಸಿಕ ನೆಮ್ಮದಿ ಪ್ರಾಪ್ತಿಯಾಗಿ ನಮ್ಮ ಜೀವನ ಪಾವನಗೊಳ್ಳುತ್ತದೆ.ಶ್ರೀಗಳ ಗುರು ಪಟ್ಟಾ ಧಿಕಾರದ ಕಾರ್ಯಕ್ರಮ ಇಡೀ ನಾಡಿನಲ್ಲಿಯೇ ಹೆಸರುವಾಸಿಯಾಗಿ ಮಾಡಿದ್ದೀರಿ ಇದು ನೀವು ಪೂಜ್ಯರ ಕುರಿತು ಹೊಂದಿರುವ ಅಪಾರ ಕಾಳಜಿಯನ್ನು ತೋರಿಸುತ್ತದೆ. ಪೂಜ್ಯರ ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವದ ನಿಮಿತ್ಯವಾಗಿ ಹಮ್ಮಿಕೊಂಡ ಈ ಪುರಾಣ ಕಾರ್ಯಕ್ರಮ ಮಾರ್ಚ್ 2ರವರೆಗೆ ನಡೆಯಲಿದೆ ಇದರ ಸದುಪಯೋಗ ಮಾಡಿಕೊಳ್ಳಿ ಎಂದರು.
ಸಾಸನೂರ ತುಂಬಗಿ ಹಿರೇಮಠದ ಮಹಾಂತಲಿಂಗ ಶಿವಾಚಾರ್ಯರು ಹಾಗೂ ಷ.ಬ್ರ.ಶ್ರೀ ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ವೇ.ಮೂ.ಡಾ. ಗುರುಲಿಂಗಯ್ಯ ಹಿರೇಮಠ(ಶಹಾಪೂರ) ಸಮ್ಮುಖ ವಹಿಸಿದ್ದರು. ವೇದಿಕೆ ಕಾರ್ಯಕ್ರಮ ಮುನ್ನ ಶ್ರೀ ಗ್ರಾಮ ದೇವತೆಗೆ ಉಡಿತುಂಬಿ, ಶ್ರೀ ಮಠದ ಪರ್ವತೇಶ್ವರ ರವರ ಗದ್ದುಗೆಗೆ ಪೂಜಿಸಲ್ಲಿಸಿ ಮೆರವಣಿಗೆಯೊಂದಿಗೆ ವೇದಿಕೆಗೆ ಆಗಮಿಸಲಾಯಿತು. ಈ ಸಮಯದಲ್ಲಿ ಪ್ರವಚನಕಾರ ವೇ.ಮೂ.ರಾಚಯ್ಯ ಶಾಸ್ತ್ರಿ ಹಿರೇಮಠ, ಸಾಹಿತಿ ಬಸವರಾಜ ಗೊರಜಿ ಕೊಡಗಾನೂರ, ಸಂಗೀತಗಾರ ಸೋಮಯ್ಯ ಸ್ವಾಮಿ, ತಬಲವಾದಕ ಮಹಾಂತೇಶ ಹರನಾಳ, ಗ್ರಾಮದ ಗಣ್ಯರು ಹಿರಿಯರು ಹಾಗೂ ಶ್ರೀ ಮಠದ ಸದ್ಭಕ್ತರು ಇದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 