ಸರ್ಕಾರಿ ನೌಕರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ : ಶ್ರೀನಿವಾಸ ಮಾನೆ
The role of government employees is very important: Srinivas Mane
ಹಾನಗಲ್ 16 :ಜನಸಾಮಾನ್ಯರಿಗೆ ಸರ್ಕಾರದ ಯೋಜನೆ, ಕಾರ್ಯಕ್ರಮ ತಲುಪುವಲ್ಲಿ ಸರ್ಕಾರಿ ನೌಕರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ಇಲ್ಲಿನ ತಮ್ಮ ಜನಸಂಪರ್ಕ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಿನದರ್ಶಿಕೆ ಬಿಡುಗಡೆಗೊಳಿಸಿದ ಅವರು ಸಾರ್ವಜನಿಕ ಸೇವೆಯಲ್ಲಿ ನಂಬಿಕೆ, ಪ್ರಾಮಾಣಿಕತೆ ಮತ್ತು ಮಾನವೀಯತೆಗಳನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ನೌಕರರು ಇನ್ನಷ್ಟು ಪರಿಣಾಮಕಾರಿಯಾಗಿ ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹ ತಲುಪಿಸುವಲ್ಲಿ ಶ್ರಮ ವಹಿಸಬೇಕಿದೆ ಎಂದು ಹೇಳಿದ ಅವರು ಸರ್ಕಾರ ಮತ್ತು ನೌಕರರ ನಡುವೆ ಸೌಹಾರ್ದತೆಯ ಸಂಬಂಧಕ್ಕೆ ಸಂಘ ಸೇತುವೆಯಾಗಿದೆ ಎಂದರು.
ಸಂಘದ ತಾಲೂಕಾಧ್ಯಕ್ಷ ಗುರುನಾಥ ಗವಾಣಿಕರ, ರಾಜ್ಯ ಪರಿಷತ್ ಸದಸ್ಯ ಪರಮೇಶ್ವರ ಗಾಡಿಹುಚ್ಚನವರ, ಪದಾಧಿಕಾರಿಗಳಾದ ಬಸವರಾಜ ದಿಡಗೂರ, ಬಸವರಾಜ ಕುಂಚೂರ, ಹೊನ್ನಪ್ಪ ಬಾರ್ಕಿ, ಎಂ.ಎಫ್.ಬಿಂಗಿ, ಗಂಗಾಧರ ವಡ್ಡರ, ಎ.ಪಿ.ಸುಗಂಧಿ, ಸದ್ದಾಂಹುಸೇನ್ ಜಾನ್ವೇಕರ, ಶ್ರೀಕಾಂತ ಹೊಸಮನಿ, ವೀರ್ಪ ಕರೆಗೊಂಡರ, ಖಂಡಪ್ಪ ಸಮ್ಮರ್ಗಿ, ಬಸವರಾಜ ಕರೆಪ್ಯಾಟಿ ಸೇರಿದಂತೆ ಅನೇಕರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 