ಮಕ್ಕಳ ರಕ್ಷಣೆಯಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳ ಅಧಿಕಾರಿ-ಸಿಬ್ಬದಿಗಳ ಪಾತ್ರ ಮಹತ್ವದ್ದಾಗಿದೆ-ಶೇಖರಗೌಡ ರಾಮತ್ನಾಳ

ಮಕ್ಕಳ ರಕ್ಷಣೆಯಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳ ಅಧಿಕಾರಿ-ಸಿಬ್ಬದಿಗಳ ಪಾತ್ರ ಮಹತ್ವದ್ದಾಗಿದೆ-ಶೇಖರಗೌಡ ರಾಮತ್ನಾಳ The role of officers and staff of child care institutions is important in protecting children - She

        ಹಾವೇರಿ 22 :  ಮಕ್ಕಳ ಸಂರಕ್ಷಣೆಯಲ್ಲಿ ಎಲ್ಲಾ ಮಕ್ಕಳ ಪಾಲನಾ ಸಂಸ್ಥೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳ ಪಾತ್ರ ಮಹತ್ವದಾಗಿದೆ. ಮಕ್ಕಳಿಗೆ ತಂದೆ -ತಾಯಿಯರಂತೆ ಪ್ರೀತಿ ತೋರಿಸಬೇಕು ಹಾಗೂ ನಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು ಎಂದು  ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ಹೇಳಿದರು. 

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಮಕ್ಕಳ ಪಾಲನಾ ಸಂಸ್ಥೆಗಳ ಅಧಿಕಾರಿಗಳು, ಮುಖ್ಯಸ್ಥರು ಹಾಗೂ ಸಿಬ್ಬಂದಿಯವರಿಗೆ “ಮಕ್ಕಳ ಸಂರಕ್ಷಣೆ ವಿಷಯದ ಕುರಿತು”  ಆಯೋಜಿಸಲಾದ ಒಂದು ದಿನದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಪಾಲನಾ ಸಂಸ್ಥೆಯಲ್ಲಿರುವ ಎಲ್ಲಾ ಸಿಬ್ಬಂದಿಗಳು ತಮ್ಮ ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಮಕ್ಕಳಿಗೆ ಇರುವ ಕಾಯ್ದೆಗಳ ಬಗ್ಗೆ ವಿವರವಾಗಿ ತಿಳಿದುಕೊಂಡು ಕರ್ತವ್ಯ ನಿರ್ವಹಿಸಬೇಕು.  18 ವರ್ಷದೊಳಗಿನ ಎಲ್ಲಾ ಮಕ್ಕಳ ರಕ್ಷಣೆಯು ನಿಮ್ಮ ಜವಾಬ್ದಾರಿಯಾಗಿರುತ್ತದೆ. ಮಕ್ಕಳ 4 ಹಕ್ಕುಗಳನ್ನು ಮಕ್ಕಳಿಗೆ ದೊರಕುವಂತೆ ಮಾಡುವುದು ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.    

ಹಿರಿಯ ದಿವಾಣಿ ನ್ಯಾಯಾಧೀಶರು  ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶ್ರೀಶೈಲಜಾ ಹೆಚ್‌. ವಿ ಅವರು ಮಾತನಾಡಿ, ಮಕ್ಕಳ ರಕ್ಷಣೆ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಕ್ಕಳ  ಕಾಯ್ದೆಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹೇಳಿದರು.  

ಕೊಪ್ಪಳ ಯುನಿಸೇಫ್ ಯೋಜನಾ ವ್ಯವಸ್ಥಾಪಕ ಹರೀಶ ಜೋಗಿ ಅವರು, ಮಕ್ಕಳ ರಕ್ಷಣೆ ಮತ್ತು ಮಕ್ಕಳಿಗೆ ಇರುವ ಬಾಲನ್ಯಾಯ ಕಾಯ್ದೆ, ಪೊಕ್ಸೋ ಕಾಯ್ದೆ-2012, ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಮಕ್ಕಳ ಹಕ್ಕುಗಳು, ಮಕ್ಕಳ ಕಲ್ಯಾಣ ಸಮಿತಿ, ಎಸ್‌. ಜೆ. ಪಿ. ಯು ಕಾರ್ಯವೈಖರಿಗಳ ಬಗ್ಗೆ ಹಾಗೂ ಸಾಮಾಜಿಕ ತನಿಖಾ ವರದಿ ತಯಾರಿಸುವ, ಮಕ್ಕಳ ವಯಕ್ತಿಕ ಪಾಲನಾ ಯೋಜನೆ  ಕುರಿತು ಉಪನ್ಯಾಸ ನೀಡಿದರು.  

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ  ಜಯಶ್ರೀ ಪಾಟೀಲ  ಅವರು ಸ್ವಾಗತಿಸಿರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಶ್ರೀಮತಿ ಗೀತಾ ಪಾಟೀಲ,  ಸದಸ್ಯರಾದ ಮಾಂತೇಶ ಹೆಚ್ ಮೂಲಿಮನಿ,ಬಸವರಾಜ ಎಸ್‌. ಕಲ್ಲವೀರ​‍್ಪನವರ ಇತರರು ಉಪಸ್ಥಿತರಿದ್ದರು. ಶ್ರೀಮತಿ ಲತಾ ಲಂಬಿ ವಂದಿಸಿದರು.