ಅಕ್ಷರ ಜ್ಞಾನಕ್ಕೆ ಬೆಳಕು ನೀಡುವ ಶಿಕ್ಷಕರ ಪಾತ್ರ ಅಪಾರ: ಶಾಸಕ ಡಾ. ಚಂದ್ರು ಲಮಾಣಿ

ಅಕ್ಷರ ಜ್ಞಾನಕ್ಕೆ ಬೆಳಕು ನೀಡುವ ಶಿಕ್ಷಕರ ಪಾತ್ರ ಅಪಾರ: ಶಾಸಕ ಡಾ. ಚಂದ್ರು ಲಮಾಣಿ  The role of teachers in illuminating the path to literacy is immense: MLA Dr. Chandru Lamani


ಲಕ್ಷ್ಮೇಶ್ವರ, ಸೆ. 5: ಪ್ರತಿಯೊಬ್ಬರ ಅಜ್ಞಾನವೆಂಬ ಅಂಧಕಾರವನ್ನು ದೂರ ಮಾಡಿ ಅಕ್ಷರ ಜ್ಞಾನದ ಬೆಳಕನ್ನು ನೀಡುವ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.  ನಗರದ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 138ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಏನೂ ತಿಳಿಯದ ಮುಗ್ಧ ಮನಸ್ಸುಗಳಿಗೆ ಅಕ್ಷರ ಜ್ಞಾನದ ಬೆಳಕು ಮೂಡಿಸಿ, ಅವರ ಉತ್ತಮ ಬದುಕಿಗೆ ದಾರಿ ತೋರಿಸುವ ಶಿಕ್ಷಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಸಮಾಜಕ್ಕೆ ಜ್ಞಾನ ಮತ್ತು ಮೌಲ್ಯಗಳನ್ನು ನೀಡುವ ಮೂಲಕ ಉತ್ತಮ ನಾಗರಿಕರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು.  ಕಾರ್ಯಕ್ರಮದಲ್ಲಿ ಮುಕ್ತಿ ಮಂದಿರ ಧರ್ಮಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ವಿಮಲ ರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.  

ವಿಧಾನ ಪರಿಷತ್ ಸದಸ್ಯ ಎಸ್‌.ವಿ. ಸಂಕನೂರ, ಮಾಜಿ ಶಾಸಕರಾದ ಜಿ.ಎಂ. ಮಹಾಂತಶೆಟ್ಟರ್, ರಾಮಣ್ಣ ಲಮಾಣಿ, ಮಂಜುನಾಥ ಕೊಕ್ಕರಗಂದಿ, ಬಸವರಾಜ ದೊಡ್ಮನಿ, ವೀರಯ್ಯ ಮಠಪತಿ ಸೇರಿದಂತೆ ಲಕ್ಷ್ಮೇಶ್ವರ-ಶಿರಹಟ್ಟಿ ತಾಲೂಕು ಮಟ್ಟದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಹಾಗೂ ವಿವಿಧ ರಾಜಕೀಯ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.  ಇದೇ ಸಂದರ್ಭದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕ-ಶಿಕ್ಷಕಿಯರನ್ನು ಸನ್ಮಾನಿಸಲಾಯಿತು.