ಸುರಕ್ಷಿತವಾಗಿ ವಾಹನ ಚಾಲನೆ ಮಾಡಲು ಕಣ್ಣುಗಳ ಪಾತ್ರ ಬಹಳ ಮುಖ್ಯ
The role of the eyes is very important for safe driving
ಹಾವೇರಿ 29: ಸುರಕ್ಷಿತವಾಗಿ ವಾಹನ ಚಾಲನೆ ಮಾಡಲು ಕಣ್ಣುಗಳ ಪಾತ್ರ ಬಹಳ ಮುಖ್ಯವಾದದ್ದು. ಆದ್ದರಿಂದ ಎಲ್ಲರೂ 40 ವರ್ಷಗಳ ನಂತರ ಕಣ್ಣುಗಳ ತಪಾಸಣೆ ಮಾಡಿಸುವುದು ಅತೀ ಸೂಕ್ತವಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ ಕಟೋಕರ ಹೇಳಿದರು. ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಶನಿವಾರ ಸಾರಿಗೆ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇವರುಗಳ ಸಹಯೋಗದಲ್ಲಿ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಕುರಿತು ಆಯೋಜಿಸಲಾದ ನೇತ್ರ ತಪಾಸಣಾ ಶಿಬಿರದ ಉದ್ಘಾಟಿಸಿ ಮಾತನಾಡಿದ ಅವರು ವಾಹನ ಚಾಲನೆ ಸಮಯದಲ್ಲಿ ಕಣ್ಣುಗಳು ಮಹತ್ತರ ಪಾತ್ರ ವಹಿಸುತ್ತವೆ. ಆದ್ದರಿಂದ ಎಲ್ಲರೂ 40 ವರ್ಷಗಳ ನಂತರ ತಮ್ಮ ಕಣ್ಣುಗಳನ್ನು ತಪಾಸಣೆ ಮಾಡಿಸಿಕೊಂಡು ದೃಷ್ಟಿದೋಷ ಇದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು.
ಅದರಲ್ಲೂ ಎಲ್ಲಾ ವಾಹನಗಳ ಚಾಲಕರುಗಳು ತಮ್ಮ ಕಣ್ಣುಗಳನ್ನು ತಪಾಸಣೆ ಮಾಡಿಸಿಕೊಂಡು ಅವಶ್ಯವಿದ್ದಲ್ಲಿ ಕನ್ನಡಕ ಧರಿಸಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳನ್ನು ಸಹ ತಡೆಯಬಹುದಾಗಿದೆ ಸಾರ್ವಜನಿಕರು ಸದರಿ ಶಿಬಿರದ ಸದುಪಯೋಗಪಡೆದುಕೊಳ್ಳಲುಬೇಕು ಎಂದು ಹೇಳಿದರು. ಈ ಶಿಬಿರದಲ್ಲಿ ನೇತ್ರ ತಪಾಸಣಾಧಿಕಾರಿ ರೇಖಾ ಬಿಶೆಟ್ಟಿ ಶಿಬಿರದ ಕುರಿತು ಮಾತನಾಡಿ ಗ್ಲುಕೊಮಾ, ಕ್ಯಾಟರಾಕ್ಷ, ಮುಂತಾದವುಗಳನ್ನು ನೇತ್ರ ತಪಾಸಣೆಯನ್ನು ಮಾಡಿ ಪತ್ತೆಹೆಚ್ಚಬಹುದಾಗಿದೆ. ಆದ್ದರಿಂದ ಕಣ್ಣಿನ ಸಮಸ್ಯೆ ಇರುವವರು ಅಲಕ್ಷ್ಯ ಮಾಡದೇ ಕಣ್ಣು ತಪಾಸಣೆ ಮಾಡಿಸಿಕೊಳ್ಳಲು ಕರೆ ನೀಡಿದರು. ಇದೇ ಸಂದಭದಲ್ಲಿ ನೇತ್ರ ತಪಾಸಣಾಧಿಕಾರಿಗಳು, ವಾಹನ ಚಾಲಕರುಗಳ ಹಾಗೂ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ನೇತ್ರ ತಪಾಸಣೆ ಜರುಗಿಸಿದರು. ಕಾರ್ಯಕ್ರಮದಲ್ಲಿ ಮೋಟಾರು ವಾಹನ ನೀರೀಕ್ಷಕರು ಸುನೀಲಕುಮಾರ ಎಚ್, ನೇತ್ರಾಧಿಕಾರಿ ಸುನೀಲ್, ಜ್ಯೋತಿ, ನೇತ್ರಾಧಿಕಾರಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಎಲ್ಲಾ ಸಿಬ್ಬಂದಿ ವರ್ಗದವರು, ಸಾರ್ವಜನಿಕರು, ಮತ್ತು ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 