ವಿಕಸಿತ್ ಭಾರತ ನಿರ್ಮಾಣಕ್ಕೆ ಯುವಕರ ಪಾತ್ರ ನಿರ್ಣಾಯಕ: ಡಾ. ಎಸ್.ವಿ.ಡಾಣಿ
The role of youth is crucial in building a developed India: Dr. S.V. Dani
ಕೊಪ್ಪಳ 27: ನಗರದಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಯುವಜನ ಮತ್ತು ಕ್ರೀಡಾ ಸಚಿವಾಲಯ, ಭಾರತ ಸರ್ಕಾರ, ಕೊಪ್ಪಳ ವಿಶ್ವವಿದ್ಯಾಲಯ, ಕೊಪ್ಪಳ, ಮೈ ಭಾರತ ಕೇಂದ್ರ, ಕೊಪ್ಪಳ ಮತ್ತು ರಾಷ್ಟ್ರೀಯ ಸೇವಾ ಯೋಜನೆಘಟಕದ ಸಹಯೋಗದಲ್ಲಿ ವಿಕಸಿತ್ ಭಾರತ ಜಿಲ್ಲಾಯುವ ಸಂಸತ್-2026 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕೊಪ್ಪಳ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಎಸ್.ವಿ. ಡಾಣಿ ಅವರುಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ವಿಕಸಿತ್ ಭಾರತ ನಿರ್ಮಾಣಕ್ಕೆಯುವಕರ ಪಾತ್ರ ನಿರ್ಣಾಯಕ. ಯುವಕರು ಪ್ರಧಾನಿಯವರ ವಿಕಸಿತ್ ಭಾರತದ ಕನಸನ್ನು ನನಸಾಗಿಸಲು ಧ್ವನಿ ಎತ್ತಬೇಕೆಂದು ಕರೆ ನೀಡಿದರು. ಸಹೋದರತ್ವ, ಭಾರತದ ಸಂಸ್ಕೃತಿ, ಸಮಾಜ ಸೇವೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಹೊಸ ಭಾರತವನ್ನು ಕಟ್ಟುವಲ್ಲಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಬೇಕುಎಂದರು.
ಈ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಣಷಕಾರರಾಗಿ ಆಗಮಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಅವರು ಮಾತನಾಡುತ್ತಾ ವಿದ್ಯಾರ್ಥಿಗಳು ಕೇವಲ ಅಂಕಗಳನ್ನು ಪಡೆಯಲು ಮಾತ್ರ ಶಿಕ್ಷಣವನ್ನು ಕಲಿಯಬಾರದು ಮತ್ತು ನೌಕರಿ ತೆಗೆದುಕೊಳ್ಳಲು ಸೀಮಿತವಾಗದೇ ಸಮಾಜ ಮುಖಿ ಕಾರ್ಯಗಳನ್ನು ಮಾಡುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಹಾಂತೇಶ ಪಾಟೀಲ ಅವರು ಮಾತನಾಡುತ್ತಾ ವಿದ್ಯಾರ್ಥಿ ಜೀವನದಿಂದಲೇ ಸಮಾಜ ಸೇವೆ, ಹೋರಾಟ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಜೊತೆಗೆ ರಾಜಕೀಯದತ್ತ ಯುವಕರು ಒಲವು ತೋರಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಚನ್ನಬಸವ ಅವರು ವಿದ್ಯಾರ್ಥಿಗಳು ತಮ್ಮ ಭಾವಿ ಜೀವನವನ್ನು ರಾಜಕೀಯದಲ್ಲಿ ಮುನ್ನಡೆಸಬೇಕು ಎಂದರು. ಅಲ್ಲದೇ ವಿಕಸಿತ್ ಭಾರತ ಕಾರ್ಯಕ್ರಮದಲ್ಲಿ ಜರುಗುವ ಸ್ಪರ್ಧೆಗಳ ನಿಯಮ ಇತ್ಯಾದಿ ವಿವರಗಳ ಬಗ್ಗೆ ಅಭ್ಯರ್ಥಿಗಳಿಗೆ ವಿವರಿಸಿದರು. ನಂತರದಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಪದವಿ ಕಾಲೇಜುಗಳಿಂದ ಆಗಮಿಸಿದ್ದ ಸುಮಾರು 80 ಕ್ಕೂ ಹೆಚ್ಚು ಅಭ್ಯರ್ಥಿಗಳು ಐವತ್ತು ವರ್ಷಗಳ ತುರ್ತು ಪರಿಸ್ಥಿತಿ: ಭಾರತೀಯ ಪ್ರಜಾಪ್ರಭುತ್ವದಿಂದ ಪಾಠಗಳು ಎಂಬ ವಿಷಯದ ಮೇಲೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.
ಪ್ರಾರಂಭದಲ್ಲಿ ಪ್ರಾಸ್ತಾವಿಕವಾಗಿ ಕೊಪ್ಪಳದ ಮೈ ಭಾರತ್ ಕೇಂದ್ರದ ಉಪನಿರ್ದೇಶಕರಾದ ಲೋಕೇಶ ಕುಮಾರ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿಗಳು ಮತ್ತು ಕಾರ್ಯಕ್ರಮ ಆಯೋಜಕರಾದ ಡಾ. ಜಾಲಿಹಾಳ ಶರಣಪ್ಪ ಅವರು ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮವನ್ನುರಾಷ್ಟ್ರೀಯ ಸೇವಾ ಯೋಜನೆ ಘಟಕದ ಮತ್ತೋರ್ವ ಕಾರ್ಯಕ್ರಮಾಧಿಕಾರಿಗಳಾದ ಶರಣಪ್ಪ ಅವರು ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಡಾ. ಮಂಜುನಾಥ ಎಂ. ಅವರು ವಂದಿಸಿದರು.
ಈ ಕಾರ್ಯಕ್ರಮದಲ್ಲಿ ಡಾ. ಸಿದ್ದಲಿಂಗಪ್ಪ ಕೊಟ್ನೆಕಲ್, ಡಾ. ಅರುಣ ಕುಮಾರ, ಡಾ. ಸುಂದರಎಸ್. ಮೇಟಿ, ಡಾ. ಕರಿಬಸವೇಶ್ವರ ಬಿ, ಕು. ಶ್ರೀದೇವಿ, ಡಾ. ನಾಗರಾಜ ದಂಡೋತಿ, ವಿನೋದ ಸಿ ಮುದಿಬಸನ ಗೌಡರ, ಡಾ. ಮಂಜುನಾಥ ಗಾಳಿ, ಡಾ. ಶಶಿಕಾಂತ ಉಮ್ಮಾಪುರೆ, ಕನಕಪ್ಪ ಗೊಂಡಬಾಳ, ಮಂಜುನಾಥ ಹಿರೇಮಠ, ಡಾ. ನಾಗೇಶ ಮತ್ತು ಜಿಲ್ಲೆಯ ವಿವಿಧ ಕಾಲೇಜುಗಳ ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 