ದೇಶದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಯುವ ಸಮೂಹದ ಪಾತ್ರ ಪ್ರಮುಖವಾಗಿದೆ -ನ್ಯಾಯಾಧೀಶರಾದ ಬಿ.ಆರ್.ಮುತಾಲಿಕ ದೇಸಾಯಿ
ಹಾವೇರಿ:ಜ.13(ಕರ್ನಾಟಕ ವಾರ್ತೆ): ನಮ್ಮ ದೇಶ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಮುಂದುವರೆಯಲು ಯುವ ಸಮೂಹದ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಆರ್.ಮುತಾಲಿಕದೇಸಾಯಿ ಅವರು ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವ ಸಮೂಹ ರಾಷ್ಟ್ರೀಯ ಯುವ ದಿನಾಚರಣೆ ಕೇಂದ್ರಬಿಂದುವಾಗಿದ್ದು, ಇಂದಿನ ಯುವ ಜನಾಂಗ ನಮ್ಮ ದೇಶದ ಮುಂದಿನ ಭವಿಷ್ಯವಾಗಿದ್ದಾರೆ. ಯುವ ಸಮೂಹ ಮುಂದಾಳತ್ವ ವಸಹಿಸಿಕೊಂಡಲ್ಲಿ ಮಾತ್ರ ಸಮಾಜ ಮತ್ತು ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಎಲ್.ಎ.ಡಿ.ಎಸ್.ನ ಉಪ ಕಾನೂನು ನೆರವು ಅಭಿರಕ್ಷಕ ಎಂ.ಸಿ.ಭರಮಣ್ಣನವರ ಅವರು ಮೂಲಭೂತ ಕರ್ತವ್ಯಗಳು ಹಾಗೂ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು.
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ನಾಗರಾಜ ಹಕ್ಕೇರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ, ಉಪನ್ಯಾಸಕರಾದ ಶೇಖರ ಭಜಂತ್ರಿ, ಎಸ್.ಸಿ.ಮರಡಿ ಇತರರು ಉಪಸ್ಥಿತರಿದ್ದರು.
ಕ್ಯಾನರ್ಸ ರೋಗಿಗಳಿಗೆ ಚಿಕಿತ್ಸೆ ನೀಡಲು ಪ್ರಸ್ತಾವನೆ ಆಹ್ವಾನ
ಹಾವೇರಿ 13: ಸಾಸ್ಟ್ (ಛಿಣ) ಮುಖಾಂತರ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ಅರ್ಹ ಸಂಸ್ಥೆಗಳು ಹಾಗೂ ಅಧಿಕೃತ ಪ್ರತಿನಿಧಿಗಳಿಂದ ಎಕ್ಸಪ್ರೆಷನ್ ಆಫ್ ಇಂಟ್ರೆಸ್ಟ್ (ಜಥಡಿಠ ಠ ಟಿಣಜಡಿಣ) ನಿಯಮಸಾನುರ ಜನೇವರಿ 21ರೊಳಗಾಗಿ ಪ್ರಾಸ್ತಾವನೆ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.