ಕಲಾ ಪ್ರತಿಷ್ಠಾನದ ನಿಸ್ವಾರ್ಥ ಸೇವೆ ಶ್ಲಾಘನೀಯ ಕಾರ್ಯ: ವಿಜಯಕುಮಾರ ಡಿ.ಎಸ್
The selfless service of the Art Foundation is a commendable act: Vijayakumar D.S.
ಧಾರವಾಡ 07:ಬದುಕಿನಲ್ಲಿ ಏನಾದರೊಂದು ಸಾಧನೆ ಮಾಡಲು ಅನೇಕರು ಪ್ರಯತ್ನಿಸುತ್ತಾರೆ. ಆದರೆ ಎಲ್ಲರಿಗೂ ಕೈಗೂಡುವುದಿಲ್ಲ. ಯಾರ ಪ್ರೋತ್ಸಾಹವೂ ಇಲ್ಲದೆ ಸ್ವತಃ ಶಕ್ತಿಮೀರಿ ಪ್ರಯತ್ನಿಸಿ ಸಾಧಿಸುವವರೂ ಇದ್ದಾರೆ ಅಂತಹವರನ್ನು ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನದ ಮಾರ್ತಾಂಡಪ್ಪ ಕತ್ತಿ ಗುರುತಿಸಿ ಗೌರವಿಸುವುದು ಶ್ಲಾಘನೀಯ ಎಂದು ಬಸವೇಶ್ವರ ಸ್ಟೀಲ್ ನ ಉದ್ಯಮಿ ವಿಜಯಕುಮಾರ ಡಿ ಎಸ್ ಹೇಳಿದರು.
ಅವರು. ಪಂ. ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ, ಧಾರವಾಡ. ಫೋರಂ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಮತ್ತು ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ಲೋಕಲ್ ಸೆಂಟರ್ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಧಾರವಾಡ ಲೋಕಲ್ ಸೆಂಟರ್‌ನ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ನ ಸಭಾಭವನದಲ್ಲಿ ಹಮ್ಮಿಕೊಂಡ ಸಾಂಸ್ಕೃತಿಕ ಮತ್ತು ಜಾಗೃತಿ ಕಾರ್ಯಕ್ರಮಗಳ ಪ್ರಯುಕ್ತ ಎ ಐ ತಂತ್ರಜ್ಞಾನದ ಜಾಗೃತಿ ಅಭಿಯಾನ ಮತ್ತು ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮುಖ್ಯ ಅತಿಥಿಗಳಾದ ಫೋರಂ ಆಫ್ ಕನ್ಸುಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ನ ಅಧ್ಯಕ್ಷರಾದ ಸಂತೋಷ್ ಅಂಚಿಟಗೇರಿ. ಅಧ್ಯಕ್ಷತೆಯನ್ನು ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನದ ಅಧ್ಯಕ್ಷರಾದ ಎಂ ಎಸ್ ಫರಾಸ ವಹಿಸಿ ಮಾತನಾಡಿದರು.
ಐಐಐಟಿ ಧಾರವಾಡದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಡಾ. ವಸುದೇವ ಪರ್ವತಿ ಉಪನ್ಯಾಸ ನೀಡಿದರು. ಸರ್ವಾಧ್ಯಕ್ಷರಾದ ಸುನೀಲ ಬಾಗೇವಾಡಿ ಗೌರವ ಉಪಸ್ಥಿತಿ ಇದ್ದರು. ಇಂ. ಸಂಜಯ ಕಬ್ಬೂರ ನಿರೂಪಿಸಿದರು. ಸಂಯೋಜಕರಾದ ಅರುಣ ಕುಮಾರ ಶೀಲವಂತ ಸ್ವಾಗತಿಸಿದರು. ಸಹಕಾರ್ಯದರ್ಶಿ ಕೃಷ್ಣಮೂರ್ತಿ ಗೊಲ್ಲರ ಪ್ರಾರ್ಥಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ ಪ್ರಸ್ತಾವಿಕವಾಗಿ ಮಾತನಾಡಿದರು. ಇಂ. ಸಿದ್ದು ಪಾಟೀಲ ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 