ಕೊಪ್ಪಳ 16: ಹನ್ನೆರಡನೆ ಶತಮಾನದ ಬಸವಾದಿ ಶರಣರಲ್ಲಿ ಒಬ್ಬರಾದ ಹಡಪದ ಅಪ್ಪಣ್ಣನವರು ಸೇವಾನುಭವಿ ಶರಣರಾಗಿದ್ದರು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥರೆಡ್ಡಿ ಅವರು ಹೇಳಿದರು.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತ್ನಲ್ಲಿ ಮಂಗಳವಾರದಂದು ಹಮ್ಮಿಕೊಳ್ಳಲಾದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
12ನೇ ಶತಮಾನವು ಸಮಾನತೆಗಾಗಿ ಹೋರಾಡಿದ ಕಾಲ ಹಾಗೂ ಅದು ಒಂದು ಕ್ರಾಂತಿಕಾರಿ ಯುಗವಾಗಿತ್ತು. ಈ ಕಾಲದಲ್ಲಿ ಬಸವಣ್ಣನವರು ಸಮಾನತೆ ಸಾರುವುದರ ಜತೆಗೆ ಅನುಭವ ಮಂಟಪದ ಮೂಲಕ ನೂರಾರು ಶರಣರನ್ನು ಒಂದೆಡೆ ಸೇರಿಸಿ, ಜಾತೀಯತೆ, ಶೋಷಣೆಗಳ ವಿರುದ್ಧ ಹೋರಾಟ, ಸಾಮಾಜಿಕ ಸುಧಾರಣೆ, ಸಮಾನತೆಗಾಗಿ ಚಚರ್ೆ ನಡೆಸಿದ್ದ ಶರಣರು, ಅಲ್ಲಿಯೇ ಕಲ್ಯಾಣ ಕ್ರಾಂತಿಯನ್ನುಂಟು ಮಾಡಿದ್ದಾರೆ. ಅನುಭವ ಮಂಟಪದ ಸಭೆಯು ಯಶಸ್ವಿಯಾಗಲು ಹಡಪದ ಅಪ್ಪಣ್ಣನವರ ಶ್ರಮ ಪ್ರಮಖವಾದದ್ದಾಗಿದೆ. ಜಗಜ್ಯೋತಿ ಬಸವೇಶ್ವರರ ಆಪ್ತರಾಗಿದ್ದ ಅಪ್ಪಣ್ಣನವರು ತಮ್ಮ ಕಾಯಕ ನಿಷ್ಠೆ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದ್ದಾರೆ. ಶರಣರು ಹಾಕಿಕೊಟ್ಟ ಮಾರ್ಗವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ರಾಜ್ಯ ಸಕರ್ಾರವು ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿಯನ್ನು ಸಕರ್ಾರಿ ಕಾರ್ಯಕ್ರಮವನ್ನಾಗಿ ಆಚರಿಸುತ್ತಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥರೆಡ್ಡಿ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷ, ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನವನ್ನು ಸಲ್ಲಿಸಿದರು. ಗ್ರಾ.ಪಂ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.