ರಾಜ್ಯ ಸರ್ಕಾರದ ಪಂಚ ಯೋಜನೆಯಿಂದ ಜನರ ಬದುಕು ಹಸನ : ಶಾಸಕ ಜೆ.ಎನ್.ಗಣೇಶ ಅಭಿಮತ
The state government's five-pronged scheme has improved people's lives: MLA J.N. Ganesh believes
ಕಂಪ್ಲಿ 11: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ಸರ್ಕಾರದ ಪಂಚ ಯೋಜನೆಗಳಿಂದ ರಾಜ್ಯದ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕು ಹಸನಾಗಿದೆ ಎಂದು ಶಾಸಕ ಜೆ.ಎನ್.ಗಣೇಶ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಹೊಸ ಬಸ್ ನಿಲ್ದಾಣದ ಕೇಂದ್ರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನತೆಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳ ಕುರಿತಾದ ವಸ್ತು ಪ್ರದರ್ಶನಕ್ಕೆ ಉದ್ಘಾಟಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ರಾಜ್ಯ ಸರ್ಕಾರ ಬಡವರ ಪರವಾಗಿ ನಿಂತಿದೆ. ಸಾಕಷ್ಟು ಜನರು ನೆಮ್ಮದಿಯಿಂದ ಜೀವನ ಸಾಗಿಸುತ್ತಿರುವುದು ಸರ್ಕಾರ ನೀಡಿದ ಹಲವು ಯೋಜನೆಗಳಿಂದಾಗಿದೆ.
ಈಗಾಗಲೇ ಸರ್ಕಾರದ ಎರಡುವರೆ ವರ್ಷ ಪೂರೈಯಿಸಿದ್ದು, ಇಂತಹ ಯೋಜನೆಗಳನ್ನು ಮುಂದುವರೆಸಿ, ಬಡವರ, ದೀನ ದಲಿತರ, ಮಧ್ಯಮ ವರ್ಗದ ಜನರ ಬದುಕಿಗೆ ಆಸರೆಯಾಗಿದೆ. ನುಡಿದಂತೆ ನಡೆ ಸರ್ಕಾರ ಕಾಂಗ್ರೆಸ್ ಸರ್ಕಾರವಾಗಿದೆ. ಸರ್ಕಾರ ರೂಪಿಸಿರುವ ಪ್ರತಿಯೊಂದು ಯೋಜನೆಗಳ ಸದ್ಭಳಕೆಯೊಂದಿಗೆ ಜನರು ಉತ್ತಮ ಜೀವನ ನಡೆಸಬೇಕು ಎಂದರು. ಈ ವೇಳೆ ಕಂಪ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸರಾವ್, ಕಂಪ್ಲಿ ತಹಶೀಲ್ದಾರರಾದ ಜೂಗಲ ಮಂಜುನಾಯ್ಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ ಗುರುರಾಜ, ಬೆರಳಚ್ಚುಗಾರ ಹನುಮೇಶ್.ಹೆಚ್., ಛಾಯಾಗ್ರಾಹಕ ಶ್ರೀಧರ್ ಕಾವಲಿ, ವಾಹನ ಚಾಲಕ ಮಲ್ಲೇಶಪ್ಪ ಸೇರಿದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಕಂಪ್ಲಿ ವಿಭಾಗದ ಅಧಿಕಾರಿಗಳು, ಜನಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಇದ್ದರು.
ಜ.14 ರ ವರೆಗೆ ವೀಕ್ಷಿಸಲು ಅವಕಾಶ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಏರಿ್ಡಸಿರುವ ವಸ್ತು ಪ್ರದರ್ಶನವು ಕಂಪ್ಲಿ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಜ.14 ರ ವರೆಗೆ ಇರಲಿದೆ. ಈ ವಸ್ತು ಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿದ್ದು, ಭೇಟಿ ನೀಡಿ ವೀಕ್ಷಿಸಬಹುದು. ವಸ್ತು ಪ್ರದರ್ಶನದ ಮಾಹಿತಿ : ವಸ್ತು ಪ್ರದರ್ಶನವು ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗಾಗಿ ರೂಪಿಸಿರುವ ಕಾರ್ಯಕ್ರಮಗಳಾದ ಬುಡಕಟ್ಟು ಕಲೆ ಮತ್ತು ಸಂಸ್ಕೃತಿ, ಪರಿಶಿಷ್ಟ ಪಂಗಡ ಪೌಷ್ಟಿಕ ಆಹಾರ ಯೋಜನೆ, ಲಿಡ್ಕರ್ ಅನುಷ್ಠಾನ ಕಾರ್ಯಕ್ರಮ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ವಿವಾಹಗಳಿಗೆ ಪ್ರೋತ್ಸಾಹಧನ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಆಯವ್ಯಯ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕ್ರೈಸ್ ವಸತಿ ಶಾಲೆಗಳಿಗೆ ಪ್ರವೇಶ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಶೈಕ್ಷಣಿಕ ಉತ್ತೇಜನ ಕಾರ್ಯಕ್ರಮ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಪ್ರತಿಭಾವಂತರಿಗೆ ಪ್ರೋತ್ಸಾಹಧನ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ವಿದ್ಯಾರ್ಥಿ ವೇತನ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ನಿಗಮ-ಮಂಡಳಿಗಳು, 2011 ರ ಜನಗಣತಿಯಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಪ.ಜಾತಿ/ಪ.ಪಂಗಡದ ಜನಸಂಖ್ಯೆ ಶೇಕಡವಾರು ಮಾಹಿತಿ ಫಲಕ ಮತ್ತು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಯ ಮಾಹಿತಿ ಫಲಕ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸಾಧನೆಯ ಮಾಹಿತಿ ಫಲಕಗಳು ಒಳಗೊಂಡಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 