ರಾಜ್ಯ ಸರಕಾರ ಹಿಟ್ಲರ ಆಡಳಿತ ನಡೆಸುತ್ತಿದೆ: ಪ್ರಭುಗೌಡ ದೇಸಾಯಿ

The state government is running Hitler's regime: Prabhu Gowda Desai

ರಾಜ್ಯ ಸರಕಾರ ಹಿಟ್ಲರ ಆಡಳಿತ ನಡೆಸುತ್ತಿದೆ: ಪ್ರಭುಗೌಡ ದೇಸಾಯಿ 

ಮುದ್ದೇಬಿಹಾಳ 12: ಪಂಚಮಸಾಲಿ ಲಿಂಗಾಯತ ಸಮುದಾಯ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರು ಸುವರ್ಣ ಸೌಧದತ್ತ ಬಂದಾಗ ರಸ್ತೆಮಧ್ಯೆ  ತಡೆದು ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು,ವಿಜಯಪುರ ಶಾಸಕ ಬಸನಗೌಡ ಪಾಟೀಲ(ಯತ್ನಾಳ್) ಹಾಗೂ ಸಮಾಜದ ಬಂಧುಗಳ ಮೇಲೆ ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ ಅಡಾಲ್ಫ್‌ ಹಿಟ್ಲರ್ ಲಾಠಿ ಪ್ರಹಾರ ನಡೆಸುವ ಮೂಲಕ ರಾಜ್ಯ ಸರಕಾರ ಹಿಟ್ಲರ ಆಡಳಿತ ನಡೆಸುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ವಾಗ್ದಾಳಿ ನಡೆಸಿದರು. 

ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಗ್ರಹ ಕಚೇರಿಯಲ್ಲಿ ಸುದ್ದಿಗಾರರೋಮದಿಗೆ ಮಾತನಾಡಿದ ಅವರು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ದೇಶದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಹಕ್ಕಿಗಾಗಿ ಹೋರಾಡುವ ಸಮಾನ ಅವಕಾಶ ವಿದೆ, ಅದನ್ನೇ ಪಂಚಮಸಾಲಿ ಸಮಾಜ ಬಾಂಧವರು ಬೇಡಿಕೆಗಳ ಬಗ್ಗೆ ಪೂಜ್ಯ ಸ್ವಾಮೀಜಿ ಅವರು, ಸಮುದಾಯದ ಪ್ರಮುಖರು ನಿರಂತರವಾಗಿ ಸರಕಾರಕ್ಕೆ ಮನವಿ ಮಾಡುತ್ತಲೇ ಇದ್ದರು. ಆದರೂ ಸರಕಾರ ಕಿವುಡಾಗಿತ್ತು, ನಿರ್ಲಕ್ಷ್ಯ ವಹಿಸಿತ್ತು.  

ಶಾಂತಿಯುತವಾಗಿ ಪ್ರತಿಭಟಿಸಲು ಬಂದ ಸ್ವಾಮೀಜಿಗಳು, ಸಮುದಾಯದ ನಾಯಕರು, ಜನತೆಯ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸ್ ವಶಕ್ಕೆ ತೆಗೆದುಕೊಂಡ ಕ್ರಮ ಖಂಡನೀಯ.ಸರಕಾರವೇ ಶಾಂತಿ ಕದಡುವ ದುಷ್ಪ್ರಯತ್ನ ಮಾಡಿದರೆ ಅದಕ್ಕೆ ಸರಕಾರವೇ ಪೂರ್ಣ ಹೊಣೆ. ಕೂಡಲೇ ಪೂಜ್ಯ ಸ್ವಾಮೀಜಿ ಅವರ ಹಾಗೂ ಸಮುದಾಯದ ಕ್ಷಮೆ ಕೇಳಬೇಕು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಬೇಕು ಎಂದುರು.