ದತ್ತಿ ಪ್ರಶಸ್ತಿ ರಾಜ್ಯಮಟ್ಟದ ಕಾರ್ಯಕ್ರಮ ಯಶಸ್ವಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ

The success of the charity award state level program requires everyone's cooperation

ದತ್ತಿ ಪ್ರಶಸ್ತಿ ರಾಜ್ಯಮಟ್ಟದ ಕಾರ್ಯಕ್ರಮ ಯಶಸ್ವಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ

ಕೊಪ್ಪಳ 14: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯ ಸಮಿತಿ ನಿರ್ಣಯಿಸಿದಂತೆ ಕೆಯು ಡಬ್ಲ್ಯುಜೇ ರಾಜ್ಯಮಟ್ಟದ ದತ್ತಿ ನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ ಕೊಪ್ಪಳದಲ್ಲಿ ಆಯೋಜಿಸಿ ಯಶಸ್ವಿಗೊಳಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಕೆಯುಡಬ್ಲ್ಯೂ ಜೆ ಜಿಲ್ಲಾ ಅಧ್ಯಕ್ಷ ಹನುಮಂತ್ ಹಳ್ಳಿಕೇರಿ ಹೇಳಿದರು.ಅವರು ಶುಕ್ರವಾರದಂದು ಇಲ್ಲಿನ ಪತ್ರಿಕಾ ಭವನ ದಲ್ಲಿ ನಡೆದ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭ ಕೊಪ್ಪಳ ದಲ್ಲಿ ಆಯೋಜಿಸಲು ಸಿದ್ಧತೆ ನಡೆಯುತ್ತಿದೆ ಶೀಘ್ರ ಅಧಿಕೃತ ದಿನಾಂಕ ನಿಗದಿ ಮಾಡಿ ರಾಜ್ಯ ಸಮಿತಿಗೆ ತಿಳಿಸಿದ ಬಳಿಕ ಅಧಿಕೃತವಾಗಿ ಅವರು ಘೋಷಣೆ ಮಾಡಲಿದ್ದಾರೆ. 

 ರಾಜ್ಯ ಘಟಕ ಅವರು ತೋರಿದ ಮಾರ್ಗದಲ್ಲಿ ಹಾಗೂ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡೋಣ ರಾಜ್ಯದ ಎಲ್ಲಾ 31 ಜಿಲ್ಲೆಗಳಿಂದ ಬರುವ ಸಂಘದ ಪದಾಧಿಕಾರಿ ಸದಸ್ಯರಿಗೆ ಸ್ವಾಗತಿಸೋಣ ಎಂದು ಸಂಘದ ಜಿಲ್ಲಾಧ್ಯಕ್ಷ ಹನುಮಂತ ಹಳ್ಳಿಕೇರಿ ಹೇಳಿದರು. 

ವೇದಿಕೆ ಮೇಲೆ ರಾಜ್ಯ ಕಾರ್ಯಕಾರಣಿ ಸದಸ್ಯ ಎಂ ಸಾಧಿಕ ಅಲಿ,  ರಾಜ್ಯ ಸಮಿತಿ ವಿಶೇಷ ಅಹ್ವಾನಿತ ಸದಸ್ಯ ಹೆಚ್‌ಎಸ್ ಹರೀಶ್, ರಾಷ್ಟ್ರೀಯ ಮಂಡಳಿ ಸದಸ್ಯ ಜಿಎಸ್ ಗೋನಾಳ್,  ಜಿಲ್ಲಾ ಖಜಾಂಚಿ ರಾಜು ಬಿ ಆರ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್‌.ವೈ, ಜಿಲ್ಲಾ ಉಪಾಧ್ಯಕ್ಷ ರುದ್ರಗೌಡ ಪಾಟೀಲ್ ಜಿಲ್ಲಾ ಕಾರ್ಯದರ್ಶಿ ವೀರಣ್ಣ ಕಳ್ಳಿಮನಿ ಪತ್ರಿಕಾ ಭವನ ಕಟ್ಟಡ ಸಮಿತಿಯ ಅಧ್ಯಕ್ಷ ಎನ್ ಎಂ ದೊಡ್ಡಮನಿ ಸೇರಿದಂತೆ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ತಾಲೂಕಿನ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು