ಯುವ ಪೀಳಿಗೆ ತಂಬಾಕಿನಿಂದ ದೂರವಿದ್ದು, ಆರೋಗ್ಯ ಯುತ ಸಮಾಜ ನಿರ್ಮಿಸಬೇಕು: ಶಿವಾನಂದ ವ್ಹಿ.ಪಿ

ಯುವ ಪೀಳಿಗೆ ತಂಬಾಕಿನಿಂದ ದೂರವಿದ್ದು, ಆರೋಗ್ಯ ಯುತ ಸಮಾಜ ನಿರ್ಮಿಸಬೇಕು: ಶಿವಾನಂದ ವ್ಹಿ.ಪಿ The young generation should stay away from tobacco and build a healthy society: Shivanand VHP

ಯುವ ಪೀಳಿಗೆ ತಂಬಾಕಿನಿಂದ ದೂರವಿದ್ದು, ಆರೋಗ್ಯ ಯುತ ಸಮಾಜ ನಿರ್ಮಿಸಬೇಕು: ಶಿವಾನಂದ ವ್ಹಿ.ಪಿ 

ಕೊಪ್ಪಳ  29:  ಇಂದಿನ ಯುವಪೀಳಿಗೆ ತಂಬಾಕು ಸೇವನೆಯಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವ್ಹಿ.ಪಿ ಅವರು ಹೇಳಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಗಂಗಾವತಿ, ಪ್ರಾಥಮಿಕ ಆರೋಗ್ಯ ಕೇಂದ್ರ ಆನೆಗುಂದಿ ಹಾಗೂ ಸರಕಾರಿ ಪ್ರೌಢಶಾಲೆ, ಮಲ್ಲಾಪೂರ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್‌ 28 ರಂದು ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕುರಿತ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. 

ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ರಾಷ್ಟ್ರೀಯ ತಂಬಾಕು ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಅರಿವು ಮೂಡಿಸಲಾಗುತ್ತಿದೆ. ಸಿಗರೇಟ್, ಬೀಡಿ, ಸಿಗಾರ್, ಹುಕ್ಕಾ ತಂಬಾಕು ವಿಧಗಳಾಗಿವೆ. ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ, ಲಕ್ವಾ ಇತರೆ ಕಾಯಿಲೆಗಳು ಬರಬಹುದು. ಪ್ರತಿ ಸಿಗರೇಟ್, ಬೀಡಿ ಸೇವನೆಯು 7 ನಿಮಿಷ ಆಯಸ್ಸು ಕಡಿಮೆ ಮಾಡುತ್ತದೆ. ತಂಬಾಕಿನಲ್ಲಿ ನಿಕೋಟಿನ್ ಎಂಬ ಅಪಾಯಕಾರಿ ಪದಾರ್ಥ ಇರುತ್ತದೆ. ಇದರಲ್ಲಿ 3000 ದಿಂದ 4000 ರಾಸಾಯನಿಕ ವಿಷಾನಿಲಗಳು ಇರುತ್ತವೆ. ಮಹಿಳೆಯರಲ್ಲೂ ತಂಬಾಕು ಸೇವನೆಯಿಂದ ಗರ್ಭಪಾತ, ಗರ್ಭಕಂಠದ ಕ್ಯಾನ್ಸರ್, ಕಡಿಮೆ ತೂಕವಿರುವ ಮಗುವಿನ ಜನನ ಹಾಗೂ ಶಿಶುಮರಣ ಸಂಭವಿಸುವ ಹೆಚ್ಚು ಸಾಧ್ಯತೆ ಇರುತ್ತದೆ. ಪ್ರತಿ ವರ್ಷ ವಿಶ್ವದಾದ್ಯಂತ 60 ಲಕ್ಷಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಇಂದಿನ ಯುವಪೀಳಿಗೆ ತಂಬಾಕು ಸೇವನೆಯಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ಎಂದು ಅವರು ತಿಳಿಸಿದರು. 

ನಂತರ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆ ನಿಯಂತ್ರಣ ಕುರಿತು ಭಾಷಣ ಸ್ಪರ್ಧೆ ಏರಿ​‍್ಡಸಿ, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಪ್ರೌಢಶಾಲೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ರೂಪಾ, ದ್ವಿತೀಯ ಸ್ಥಾನ ಪಡೆದ ವಾಣಿ, ತೃತೀಯ ಸ್ಥಾನ ಪಡೆದ ಮಾರುತಿ, ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ದುರ್ಗಮ್ಮ, ದ್ವಿತೀಯ ಸ್ಥಾನ ಪಡೆದ ಮಾರುತಿ ಹಾಗೂ ತೃತೀಯ ಸ್ಥಾನ ಪಡೆದ ರೇಣುಕಾ ಇವರಿಗೆ ಬಹುಮಾನ ವಿತರಿಸಲಾಯಿತು. 

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶರಣಯ್ಯ, ಶಿಕ್ಷಕರಾದ ಶಿವಪ್ಪ, ತಾಲೂಕಾ ಕಾರ್ಯಕ್ರಮ ವ್ಯವಸ್ಥಾಪಕರಾದ ರೇಣುಕಾ, ಆರೋಗ್ಯ ನೀರೀಕ್ಷಣಾಧಿಕಾರಿಗಳಾದ ಜಾವೀದ್, ಆರೋಗ್ಯ ಸಿಬ್ಬಂದಿಗಳಾದ ಸುನೀತಾ, ಎಸ್‌.ಡಿ.ಎಂ.ಸಿ ಅಧ್ಯಕ್ಷರು, ಸಹಶಿಕ್ಷಕರು, ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.