ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ವಿಧಿವಶ
ಬೆಂಗಳೂರು, ಮೇ 2ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇಂದು ವಿಧಿವಶರಾಗಿದ್ದಾರೆ. 85 ವರ್ಷದ ಹಿರಣ್ಣಯ್ಯ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಂಗ ಕಲಾವಿದರಾಗಿ ಮಾತ್ರವಲ್ಲದೆ ಸಿನಿಮಾಗಳಲ್ಲಿ ಅಭಿನಯಿಸಿದ್ದ ಮಾಸ್ಟರ್ ಹಿರಣ್ಣಯ್ಯ ತಮ್ಮ ವಿಡಂಬನಾತ್ಮಕ ನಾಟಕಗಳಿಂದಲೇ ಖ್ಯಾತರಾಗಿದ್ದರು. ಹಿರಣ್ಣಯ್ಯನವರು 'ಲಂಚಾವತಾರ' ನಾಟಕದ ಮೂಲಕ ಕರ್ನಾಟಕ ದಲ್ಲಿ ಮನೆ ಮಾತಾಗಿದ್ದು, ಅಪಾರ ಜನಪ್ರಿಯತೆ ಗಳಿಸಿದ್ದರು. ಫೆಬ್ರವರಿ 15,1934ರಲ್ಲಿ ಜನಿಸಿದ್ದರು. ಇವರ ಬಾಲ್ಯದ ಹೆಸರು ನರಸಿಂಹಮೂರ್ತಿ . ತಂದೆ ಕೆ. ಹಿರಣ್ಣಯ್ಯನವರು 1940ರಲ್ಲಿ ರಚಿಸಿ,ನಿರ್ದೇಶಿಸಿದ ಚಲನಚಿತ್ರ 'ವಾಣಿ'ಯಲ್ಲಿ ಹಿರಣ್ಣಯ್ಯನವರು ಪಾದರ್ಪಣೆ ಮಾಡಿದರು. 1948ರಲ್ಲಿ ರಂಗಭೂಮಿಯಲ್ಲಿ ಚಿಕ್ಕ ಪಾತ್ರಮಾಡಲು ಹೋಗಿ ಸೋತರೂ ಛಲದಿಂದ ಕಾಲೇಜಿನಲ್ಲಿ ಸಂಘ ಕಟ್ಟಿ 'ಆಗ್ರಹ' ಎಂಬ ನಾಟಕವನ್ನು ಪ್ರದಶರ್ಿಸಿದರು. ಅದ್ಭುತ ಅಭಿನಯದಿಂದ ನಾಟಕವೇನೋ ಗೆದ್ದಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 