ಪರಂಪರೆಯ ಉಳಿವಿಗೆ ದಾರ್ಶನಿಕರ ಸಿದ್ಧಾಂತ ಮಾದರಿ: ಕೆ.ಲೀಲಾವತಿ
ಹಾವೇರಿ14: ಸಮಾಜದ ಅಭಿವೃದ್ಧಿ, ಸಂಸ್ಕೃತಿಯ ಬೆಳವಣಿಗೆ ಹಾಗೂ ಪರಂಪರೆ ಉಳಿವಿಗಾಗಿ ವಚನಕಾರರ ಹಾಗೂ ಶಿವಶರಣರ ತತ್ವ ಸಿದ್ಧಾಂತಗಳು ದಾರಿದೀಪವಾಗಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಕೆ.ಲೀಲಾವತಿ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ಬಸವಣ್ಣ, ಶಂಕರಾಚಾರ್ಯ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಹಾಗೂ ಭಗೀರಥ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಸವಣ್ಣನವರು ಮೇಲು-ಕೀಳು ಎಂಬ ಬೇಧ ಭಾವ ಹೋಗಲಾಡಿಸಲು ಹಾಗೂ ಸಮ ಸಮಾಜ ನಿಮರ್ಾಣ ಮಾಡಲು ಶ್ರಮಿಸಿದವರು.
12ನೇ ಶತಮಾನದಲ್ಲಿ ವಚನ ಸಾಹಿತ್ಯದ ಮೂಲಕ ಸಮಾಜದ ಸುಧಾರಣೆಗೆ ಮುಂದಾದ ವಚನಕಾರರು ವೈಚಾರಿಕ ಚಿಂತನೆಗಳು, ಮಾನವೀಯ ಮೌಲ್ಯಗಳನ್ನು ಸಾರಿದರು. ಅವರ ತತ್ವ ಸಿದ್ಧಾಂತಗಳು ಜೀವನ ಆದರ್ಶಗಳು ಸಾರ್ವಕಾಲಿಕ. ಬಸವಣ್ಣನವರ ಮಾನವೀಯ ಮೌಲ್ಯಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಹೇಳಿದರು.
ವಿಶೇಷ ಉಪನ್ಯಾಸ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಂಜಣ್ಣ ಅವರು ಮಾತನಾಡಿ, ಬಸವಣ್ಣ ಅವರು ಮಹಾಮಾನವತಾವಾದಿಗಳು. ಜಾತಿ, ಮತ, ಪಂಥಗಳ ಬೇಧವಿಲ್ಲದೆ ಎಲ್ಲರು ಸರಿಮಾನರು ಎಂದು ಅಪ್ಪಿಕೊಂಡವರು.
ಅವರ ವಚನಗಳು ಸಮಾಜ ಸುಧಾರಣೆಗೆ ಸಹಕಾರಿಯಾಗಿವೆ ಹಾಗೂ ಆದಿ ಗುರು ಶಂಕರಾಚಾರ್ಯರು ತಮ್ಮ ತತ್ವ ಸಿದ್ಧಾಂತಗಳಿಂದ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಯೂರಿದ್ದಾರೆ ಎಂದು ಹೇಳಿದರು.
ಉಪನ್ಯಾಸಕ ಕಾಂತೇಶ ರೆಡ್ಡಿ ಅವರು ಮಾತನಾಡಿ, ಶಿವರಣೆ ಹೇಮರಡ್ಡಿ ಮಲ್ಲಮ್ಮ ಆಚಾರ, ವಿಚಾರ ಹಾಗೂ ದಾನ, ಧರ್ಮ ತ್ಯಾಗ ಮನೋಭಾವದಿಂದ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕ ಆರ್.ಎಸ್.ಚಿನ್ನಿಕಟ್ಟಿ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಮಾಜದ ವಿವಿಧ ಮುಖಂಡರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 