ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಅಗತ್ಯವಿದೆ: ಯಾದಗಿರಿ
There is a need to develop a scientific attitude: Yadagiri
ತಾಳಿಕೋಟಿ: ವಿಜ್ಞಾನದ ವಿಸ್ಮಯಗಳು ನಮ್ಮ ಜಗತ್ತನ್ನು ಬದಲಿಸುವ ಸಾಮರ್ಥ್ಯ ಹೊಂದಿದೆ. ವಿಜ್ಞಾನಿಗಳನ್ನು ಬೆಂಬಲಿಸಿ ವೈಜ್ಞಾನಿಕ ಅನ್ವೇಷಣೆಯ ಜಗತ್ತನ್ನು ಅರಿಯಲು ಅವರಿಗೆ ಅವಕಾಶ ಒದಗಿಸಬೇಕು. ವೈಜ್ಞಾನಿಕ ಮನೋಭಾವ ಬೆಳೆಸುವ ಮೂಲಕ ಆವಿಷ್ಕಾರಗಳು ಮತ್ತು ಜ್ಞಾನ ಕೇಂದ್ರಿತ ಭವ್ಯ ಭವಿಷ್ಯ ನಿರ್ಮಿಸಲು ಸಾಧ್ಯವಿದೆ. ಭಾರತೀಯ ವಿಜ್ಞಾನ ದಿನದ ಸಂದರ್ಭದಲ್ಲಿ ಎಲ್ಲರೂ ಒಂದಾಗಿ ವಿಜ್ಞಾನವನ್ನು ಸಂಭ್ರಮಿಸಿ, ಜಗತ್ತಿನ ವಿಸ್ಮಯಗಳನ್ನು ಅರಿತುಕೊಳ್ಳಲು ಮತ್ತು ಮಾನವ ಜನಾಂಗಕ್ಕೆ ನೆರವಾಗಬಲ್ಲ ಹೊಸ ಅನ್ವೇಷಣೆಗಳನ್ನು ನಡೆಸಲು ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುವ ಅಗತ್ಯತೆಯಿದೆ ಎಂದು ವಿದ್ಯಾದರ ಎನ್. ಯಾತಗಿರಿ ಮುಖ್ಯ ಗುರುಗಳು ಸರ್ಕಾರಿ ಪ್ರೌಢಶಾಲೆ, ಆಲೂರು ಹೇಳಿದರು.
ತಾಳಿಕೋಟೆಯ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಪ್ರಾಯೋಜಿತ ವಿಜ್ಞಾನ ವಿಭಾಗದ ಅಡಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ ಭಾರತೀಯ ವಿಜ್ಞಾನ ದಿನದ ಹಿಂದೆ ಇದೇ ದಿನದಂದು ಭಾರತೀಯ ಭೌತಶಾಸ್ತ್ರಜ್ಞ ಸರ್. ಸಿ. ವಿ. ರಾಮನ್ ಅವರು 1928ರಲ್ಲಿ ರಾಮನ್ ಪರಿಣಾಮವನ್ನು ಸಂಶೋಧಿಸಿದ ಕಾರಣವೂ ಇದೆ. ರಾಮನ್ ಪರಿಣಾಮ ಒಂದು ಅತ್ಯಂತ ಮಹತ್ವದ ವೈಜ್ಞಾನಿಕ ವಿದ್ಯಮಾನವಾಗಿದ್ದು, ಬೆಳಕು ಹೇಗೆ ವಸ್ತುವಿನೊಂದಿಗೆ ಪ್ರತಿಕ್ರಿಯಿಸುತ್ತದೆ ಎನ್ನುವುದನ್ನು ವಿವರಿಸುತ್ತದೆ. ವಿಜ್ಞಾನದ ವಿಸ್ಮಯಗಳ ಅನ್ವೇಷಣೆ ಭಾರತದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ರಾಷ್ಟ್ರೀಯ ವಿಜ್ಞಾನ ದಿನ ಎಲ್ಲ ವಯೋಮಾನದ ಭಾರತೀಯರಲ್ಲೂ ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸುವ ಮತ್ತು ಆಸಕ್ತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಆ ಮೂಲಕ ಭಾರತೀಯರು ಆಸಕ್ತಿದಾಯಕವಾದ ವಿಜ್ಞಾನ ಪ್ರಪಂಚದಲ್ಲಿ ತೊಡಗುವಂತೆ ಮಾಡುವ ಮಹತ್ವದ ಜವಾಬ್ದಾರಿ ಹೊಂದಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯರು ಡಾ. ಆರ್. ಎಂ. ಬಂಟನೂರ ರಾಷ್ಟ್ರೀಯ ವಿಜ್ಞಾನ ದಿನ ಎಲ್ಲ ಭಾರತೀಯರೂ ಒಂದಾಗಿ ವಿಜ್ಞಾನದ ಶಕ್ತಿಯನ್ನು ಸಂಭ್ರಮಿಸುವ ಸಂದರ್ಭವಾಗಿದೆ. ಇದು ವೈಜ್ಞಾನಿಕ ಸಾಧನೆಗಳನ್ನು ಪ್ರದರ್ಶಿಸಲು ವೇದಿಕೆ ಒದಗಿಸುತ್ತದೆ ವೈಜ್ಞಾನಿಕ ಆಲೋಚನೆಯನ್ನು ಉತ್ತೇಜಿಸುತ್ತದೆ ಮತ್ತು ಭಾರತದಲ್ಲಿ ವೈಜ್ಞಾನಿಕ ಸಂಶೋಧನೆ ಮತ್ತು ಆವಿಷ್ಕಾರಗಳಿಗೆ ಬೆಂಬಲ ನೀಡುತ್ತದೆ ಎಂದರು. ವಿದ್ಯಾರ್ಥಿಗಳಿಗೆ ವಿಜ್ಞಾನ ವಿಭಾಗದ ಉಪನ್ಯಾಸಕ ಎಂ. ಎ. ಪೋತದಾರ ಪ್ರತಿಜ್ಞಾವಿಧಿಯನ್ನು ಬೋಧಿಸಿದರು
ರಾಷ್ಟ್ರೀಯ ವಿಜ್ಞಾನ ದಿನ ಅಂಗವಾಗಿ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆಯನ್ನು ಏರಿ್ಡಸಲಾಗಿತ್ತು ಪ್ರಶಿಕ್ಷಣಾರ್ಥಿಗಳು ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ರಂಗೋಲಿಗಳನ್ನು ಬಿಡಿಸಿದರು ವಿದ್ಯಾರ್ಥಿಗಳು ವಿಜ್ಞಾನ ದಿನ ಕುರಿತು ಕಿರು ನಾಟಕವನ್ನು ಪ್ರದರ್ಶಿಸಿದರು. ವಿಜ್ಞಾನ ಹಾಡುಗಳಿಗೆ ನೃತ್ಯವನ್ನು ಮಾಡಿದರು. ಪಿಪಿಟಿ ಮೂಲಕ ಸಂತೋಷ ಬಿರಾದಾರ ಪ್ರಪಂಚಕ್ಕೆ ಭಾರತ ವಿಜ್ಞಾನಿಗಳು ನೀಡಿದ ಕೊಡುಗೆಗಳ ಕುರಿತು ಸಮಗ್ರವಾಗಿ ಚಿತ್ರ ಪ್ರದರ್ಶಿಸಿ ವಿವರಿಸಿ ಹೇಳಿದರು. ವೇದಿಕೆ ಮೇಲೆ ವಿಜ್ಞಾನ ಉಪನ್ಯಾಸಕ ಸುರೇಶ ಬಡಿಗೇರ ಐಕ್ಯೊಎಸಿ ಸಂಯೋಜಕ ಉಮೇಶ ಮಂಗೊಂಡ. ಮಹಾವಿದ್ಯಾಲಯದ ಸರ್ವ ಸಿಬ್ಬಂದಿ ವರ್ಗ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಪಾರ್ವತಿ ಸಂಗಡಿಗರು ಪ್ರಾರ್ಥಿಸಿದರು ಐಶ್ವರ್ಯ ದೊಡಮನಿ ಸ್ವಾಗತಿಸಿ ಪರಿಚಯಿಸಿದರು ಶ್ವೇತಾ ಚವಾಣ್ ವಂದಿಸಿದರು ರೂಪಾ ಕಾಖಂಡಿಕೆ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 