ರಕ್ತಕ್ಕೆ ರಕ್ತವೇ ಪರ್ಯಾಯ ಹೊರತು ಬೇರೊಂದಿಲ್ಲ - ಪ್ರಾಚಾರ್ಯ ಡಾ. ಜರಕುಂಟಿ
There is no alternative to blood except blood - Principal Dr. Jarakunti
ಮುಧೋಳ 02 : ಆಧುನಿಕ ತಂತ್ರಜ್ಞಾನದ ಈ ಯುಗದಲ್ಲಿ ಅದೆಷ್ಟೇ ಆವಿಷ್ಕಾರ, ಸಂಶೋಧನೆಗಳು ನಡೆದರೂ ರಕ್ತವನ್ನು ಮಾತ್ರ ಸಂಶೋಧಿಸಲು ಈವರೆಗೆ ಯಾರಿಂದಲೂ ಸಾಧ್ಯವಾಗಿಲ್ಲ, ರಕ್ತಕ್ಕೆ ರಕ್ತವೇ ಪರ್ಯಾಯ ಹೊರತು ಬೇರೊಂದಿಲ್ಲ, ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಇನ್ನೊಬ್ಬರ ರೋಗಿಗಳ ಪ್ರಾಣ ಉಳಿಸುವ ಪುಣ್ಯದ ಕಾರ್ಯದಲ್ಲಿ ತಾವುಗಳು ಕೈ ಜೋಡಿಸಬೇಕೆಂದು ನಗರದ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಜರಕುಂಟಿ ಹೇಳಿದರು.
ಬಾಗಲಕೋಟ ಬಿವ್ಹಿವ್ಹಿ ಸಂಘದ ನಗರದ ಶ್ರೀ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಯುಥ್ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಎನ್‌ಎಸ್‌ಎಸ್ ಎನ್.ಸಿ.ಸಿ ಹಾಗೂ ಬಾಗಲಕೋಟೆಯ ಶ್ರೀ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ ಶ್ರೀ ಕುಮಾರೇಶ್ವರ ಆಸ್ಪತ್ರೆಯ ರಕ್ತ ಭಂಡಾರದ ಸಹಯೋಗದಲ್ಲಿ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಅನೇಕ ಜನರ ಜೀವಗಳನ್ನು ಉಳಿಸಬಹುದು, ರಕ್ತದಾನ ಮಾಡುವದರಿಂದ ಆಗುವ ಉಪಯೋಗ ಹಾಗೂ ಅನುಕೂಲತೆಗಳ ಬಗ್ಗೆ ಉದಾಹರಣೆ ಸಮೇತ ವಿವರಿಸಿದರು.
ರಕ್ತ ಭಂಡಾರದ ಮುಖ್ಯಸ್ಥ ಕೇಶವ ಕುಲಕರ್ಣಿ ಮತ್ತು ಸಿಬ್ಬಂದಿಯವರು, ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಯ ವೈದ್ಯರು, ವೈ.ಆರ್.ಸಿ ಮತ್ತು ಆರ್.ಆರ್.ಸಿ ಕಾರ್ಯಕ್ರಮಾಧಿಕಾರಿ ವೀರಣ್ಣ ಕಿತ್ತೂರ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ.ಲೋಕೇಶ ರಾಠೋಡ, ಎನ್.ಸಿ.ಸಿ ಲೆಪ್ಟಿನೆಂಟ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಅನೀಲಕುಮಾರ ಮುನ್ನೊಳ್ಳಿ, ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 