ಪಶ್ಚಿಮ ಘಟ್ಟಗಳಿಗೆ ಹಾನಿಯಿಲ್ಲ: ಉ. ಕ. ಜಿಲ್ಲೆಯಲ್ಲಿ ರೂ.21 ಸಾವಿರ ಕೋಟಿ ಮೊತ್ತದ ಯೋಜನೆಗಳಿವೆ: ಸಚಿವ ವಿ.ಸೋಮಣ್ಣ
There is no damage to the Western Ghats: There are projects worth Rs. 21 thousand crores in the U.
ಕಾರವಾರ 06: ಉತ್ತರ ಕನ್ನಡ ಜಿಲ್ಲೆಯಲ್ಲಿ ರೈಲ್ವೆ ಇಲಾಖೆ ವತಿಯಿಂದ ಸುಮಾರು ರೂ. 21 ಸಾವಿರಕ್ಕೂ ಕೋಟಿ ಗೂ ಅಧಿಕ ಮೊತ್ತದ ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಅವರು ಶನಿವಾರ ಕಾರವಾರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಸುದ್ದಿಗಾರರ ಜೊತೆ ಮಾತನಾಡಿದರು. ಮಲೆನಾಡು ಮತ್ತು ಬಯಲುಸೀಮೆಯನ್ನು ಜೋಡಿಸುವ ಉದ್ದೇಶದಿಂದ ತಾಳಗುಪ್ಪ-ಶಿರಸಿ-ಹುಬ್ಬಳಿ 158 ಕಿ.ಮೀ ಉದ್ದದ ಹೊಸ ಮಾರ್ಗವು ರೈಲ್ವೆ ಮಂಡಳಿಯಲ್ಲಿ ಅನುಮೋದನೆಯಾಗಿದೆ.
ಈ ಯೋಜನೆ ಡಿಪಿಆರ್ ಸಚಿವ ಸಂಪುಟದಲ್ಲಿ ಅನುಮೋದನೆಯಾಗಬೇಕಿದೆ. ಈ ಯೋಜನೆ ಮತ್ತು ತಾಳಗುಪ್ಪ ಹೊನ್ನಾವರ ಹೊಸ ಮಾರ್ಗಕ್ಕೆ ಒಟ್ಟು ಸುಮಾರು 21 ಸಾವಿರ ಕೋಟಿ ಖರ್ಚು ತಗುಲಲಿದೆ ಎಂದು ವಿವರಿಸಿದರು.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಮುರ್ಡೇಶ್ವರ, ಗೋಕರ್ಣ ಮತ್ತು ಹೊನ್ನಾವರ ರೈಲ್ವೆ ನಿಲ್ದಾಣಗಳ ಆಧುನೀಕರಣ ಕಾಮಗಾರಿ ಪ್ರಾರಂಭವಾಗಿದೆ ಎಂದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಹುಬ್ಬಳ್ಳಿ- ಅಂಕೋಲಾ ನಡುವಿನ 164 ಕಿ.ಮೀ ಉದ್ದದ ನೂತನ ಯೋಜನೆಯನ್ನು 16,500 ಕೋಟಿ ವೆಚ್ಚದಲ್ಲಿ ರೈಲ್ವೆ ಇಲಾಖೆ ವತಿಯಿಂದ ಮಾಡಲಾಗುತ್ತಿದೆ.
ಈಗಾಗಲೇ ಸರ್ವೇ, ಡಿಪಿಆರ್, ಫಾರೆಸಟ್ ಕ್ಲಿಯರೆನ್ಸ್ ಕೂಡ ಮುಕ್ತಾಯಗೊಂಡಿದ್ದು, ವನ್ಯಜೀವಿ ಕ್ಲಿಯರೆನ್ಸ್ ಬಾಕಿ ಇದೆ. ಇನ್ನು 5-6 ತಿಂಗಳಿನೊಳಗೆ ಇದಕ್ಕೆ ಪರಿಹಾರ ಸಿಗುವ ನೀರೀಕ್ಷೆ ಇದೆ. ಈ ಯೋಜನೆಯಿಂದ ಪಶ್ಚಿಮ ಘಟ್ಟಗಳಿಗೆ ಯಾವುದೇ ರೀತಿಯಲ್ಲಿ ಅನಾನುಕುಲವಾಗುವುದಿಲ್ಲ ಎಂದರು.
ಕೊಂಕಣ ರೈಲ್ವೆಯ ವೀಲೀನ ಪ್ರಕ್ರಿಯೆಗೆ ಮಹಾರಾಷ್ಟ್ರ , ಕರ್ನಾಟಕ ಕೊಂಕಣ ರೈಲ್ವೆ ನೌಕರರ, ಕಾರ್ಮಿಕರ ವಿರೋಧ ಬಂದಿದೆ ಎಂದರು. ಈ ಬಗ್ಗೆ ಚರ್ಚೆ ನಡೆದಿದೆ. ಆಗುಹೋಗಗಳ ಬಗ್ಗೆ ಚರ್ಚಿಸಲಾಗುತ್ತಿದೆ. ರೈಲ್ವೆಯ ಬಹುತೇಕ ರೈಲು ನಿಲ್ದಾಣಗಳು ಆಧುನೀಕರಣಗೊಳ್ಳುತ್ತಿವೆ ಎಂದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ರೈಲ್ವೆ ಮೆನೇಜರ್ ಆಶಾ ಶೆಟ್ಟಿ, ಮುಖ್ಯ ಇಂಜಿನಿಯರ್ ಪ್ರಕಾಶ್, ಹಿರಿಯ ಪ್ರಾದೇಶಿಕ ಸಂಚಾರ ವ್ಯವಸ್ಥಾಪಕ ದೀಲೀಪ್ ಭಟ್, ಹಿರಿಯ ಇಂಜಿನಿಯರ್ ಉದಯ ಭಾಸ್ಕರ್, ಮುಖ್ಯ ಇಂಜಿನಿಯರ್ ವಿಜಯ್ ಕುಮಾರ್, ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ, ಹಿರಿಯ ಪ್ರಾದೇಶಿಕ ಆರ್ಥಿಕ ಸಲಹೆಗಾರ ಪ್ರದೀಪ್ ಬಾಳಿಗ ಮತ್ತಿತರರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 