ಜಂಟಿ ಸಮೀಕ್ಷೆ ಮಾಡುವುದು ಅವಶ್ಯಕತೆ ಇಲ್ಲ ಪ್ರತಿ ಎಕರೆಗೆ 50,000 ಪರಿಹಾರ ಕೊಡುವಂತೆ ಆಗ್ರಹ
There is no need to conduct a joint survey, demand for compensation of 50,000 per acre
ಜಂಟಿ ಸಮೀಕ್ಷೆ ಮಾಡುವುದು ಅವಶ್ಯಕತೆ ಇಲ್ಲ ಪ್ರತಿ ಎಕರೆಗೆ 50,000 ಪರಿಹಾರ ಕೊಡುವಂತೆ ಆಗ್ರಹ
ಚಡಚಣ 14: ಕಳೆದ ಐದು ತಿಂಗಳಿಂದ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಪ್ರತಿ ಹಳ್ಳಿಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಎಲ್ಲ ಬೆಳೆಗಳು ಸಂಪೂರ್ಣ ನೀರಲ್ಲಿ ನಿಂತು ಹಾಳಾಗಿವೆ. ಜಂಟಿ ಸಮೀಕ್ಷೆ ನೆಪದಲ್ಲಿ ಯಾವುದೇ ಸಮಯವನ್ನು ಹಾಳು ಮಾಡದೆ ತಾಲೂಕಿನ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬ ರೈತರಿಗೂ ಒಣ ಬೇಸಾಯಕ್ಕೆ 50,000 ಹಾಗೂ ನೀರಾವರಿ ಭೂಮಿಗೆ ಒಂದು ಲಕ್ಷ ರೂಪಾಯಿ ಹಾಗೆ ಬಹು ವಾರ್ಷಿಕ ಬೆಳೆಗಳಿಗೆ 2ಲಕ್ಷ ಪರಿಹಾರವನ್ನು ಕೊಡಬೇಕೆಂದು ಈ ಮೂಲಕ ಜಿಲ್ಲಾಡಳಿತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅಗ್ರಹ ಮಾಡಿದರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಚಡಚಣ ತಾಲೂಕು ದಂಡಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ವಿಪರೀತ ಮಳೆಯಿಂದಾಗಿ ತಾಲೂಕಿನ ಕೃಷಿ ಬೆಳೆಗಳಾದ ತೊಗರಿ ಹತ್ತಿ ಮೆಕ್ಕೆಜೋಳ ಸಜ್ಜಿ ಸೇರಿದಂತೆ ಸಮಸ್ತ ಬೆಳೆಗಳು ಹಾಳಾಗಿವೆ ದ್ರಾಕ್ಷಿ ದಾಳಿಂಬ್ರಿ ಲಿಂಬೆ, ಬಾಳೆ ಸೇರಿದಂತೆ ಎಲ್ಲ ಬೆಳೆಗಳಲ್ಲಿ ನೀರು ನಿಂತು ಹಾಳಾಗಿವೆ ಆದ್ದರಿಂದ ಯಾವುದೇ ಜಂಟಿ ಸಮೀಕ್ಷೆ ವೈಮಾನಿಕ ಸಮೀಕ್ಷೆ ಎಂದು ನೆಪ ಹೇಳದೆ 15 ದಿನದ ಒಳಗಾಗಿ ಜಿಲ್ಲೆಯ ಎಲ್ಲರಿಗೂ ಪರಿಹಾರ ಬರಲೇಬೇಕೆಂದು ಒತ್ತಾಯ ಮಾಡಲಾಯಿತು ಸಮಸ್ತ ಬೆಳೆಗಳು ಕೂಡ ನಷ್ಟಗೊಂಡಿರುವ ಹಿನ್ನೆಲೆಯಲ್ಲಿ ಯಾರಿಗೂ ತಾರತಮ್ಯ ಮಾಡದೆ ಎಲ್ಲರಿಗೂ ನಷ್ಟ ಪರಿಹಾರವನ್ನು ಹಾಕಬೇಕು ಅದೇ ರೀತಿಯಾಗಿ ಫಸಲು ಭೀಮಾ ಯೋಜನೆಯ ವಿಮೇವೂ ಕೂಡ ಆದಷ್ಟು ಬೇಗನೆ ಕೊಡಬೇಕೆಂದರು ತಾಲೂಕ ಅಧ್ಯಕ್ಷರಾದ ವಸಂತ ಬೈರಾಮಡಿ ಅವರು ಮಾತ್ನಾಡುತ್ತಾ ಭೀಮೆ, ಕೃಷ್ಣಾ ಹಾಗೂ ದೋಣಿಯ ಪ್ರವಾಹದಿಂದಾಗಿ ಸಾಕಷ್ಟು ರೈತರ ಕೃಷಿ ಭೂಮಿಗಳ ಬೆಳೆಗಳು ಹಾಳಾಗಿರುವ ಜೊತೆಗೆ ಮನೆ ಮಠಗಳು ಕೂಡ ಬಿದ್ದು ಹಲವಾರು ಪ್ರಾಣಿಗಳು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ ಇದಕೆಲ್ಲ ಪರಿಹಾರ ನೀಡಬೇಕೆಂದು ಆಗ್ರಹ ಮಾಡುತ್ತಿದ್ದೇವೆ ಒಂದು ವೇಳೆ ತಡವಾದರೆ ಉಗ್ರ ಹೋರಾಟ ಮಾಡಲಾಗುವುದು ಎಂದರು.ಜಿಲ್ಲಾ ಕಾರ್ಯದರ್ಶಿ ಯಾದ ಮಹದೇವ್ ಬನಸೋಡೆ ಅವರು ಮಾತನಾಡುತ್ತ ನೆಪ ಮಾತ್ರಕ್ಕೆ ಸಮೀಕ್ಷೆ ಮಾಡಿ ಕಣ್ಣಿಗೆ ಕಾಣಬರುವ ಕೆಲವೇ ರೈತರಿಗೆ ನಷ್ಟ ಪರಿಹಾರ ಕೊಡುವುದಾಗಿ ವರದಿ ತಯಾರಿಸಿದ್ದೀರಿ ಆದರೆ ತಾಲೂಕಿನ ಎಲ್ಲಾ ಹಳ್ಳಿಯ ರೈತರಿಗೆ ಮಳೆಯಿಂದ ನಷ್ಟವಾಗಿದೆ.
ಅವರೆಲ್ಲರಿಗೂ ಮತ್ತೊಮೆ ಸಮೀಕ್ಷೆ ಮಾಡಿ ಅವರಿಗೂ ಪರಿಹಾರ ಕೊಡಿ ಎಂದರು. ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಎಸ್. ಬಿ. ಇಂಗಳೇ ಅವರು ಈಗಾಗಲೇ ಮೊದಲೇ ಹಂತದಲ್ಲಿ ನಷ್ಟಗೊಂಡ ರೈತರಿಗೆ ಪರಿಹಾರಕ್ಕೆ ಗುರುತಿಸಲಾಗಿತ್ತು, ಮತ್ತೆ ಇತ್ತೀಚಿಗೆ ಹೆಚ್ಚಿನ ಮಳೆ ಉಂಟಾಗಿ ಅನೇಕ ರೈತರ ಜಮೀನುಗಳಲ್ಲಿ ನೀರು ನಿಂತು ನಷ್ಟಗೊಂಡಿರುವ ಕುರಿತು ಪ್ರಥಮ ವರದಿಯನ್ನು ಆಯಾ ಗ್ರಾಮ ಪಂಚಾಯತ್ ಅಥವಾ ತಲಾಟಿ ಕಚೇರಿ ಮುಂದೆ ಅಂಟಿಸಲಾಗಿದೆ. ಇನ್ನು ಯಾವ್ ರೈತರು ನಷ್ಟಗೊಂಡು ಉಳಿದಿದ್ದರೆ ಅಂಥವರು ದಾಖಲೆಗಳನ್ನು ಕೊಡುವಂತೆ ತಿಳಿಸಿದರು. ಈ ವೇಳೆ ಗೌರವಾಧ್ಯಕ್ಷರಾದ ಮುರಗೇಂದ್ರ ಸಿಂಪಿ, ಗೇನಪ್ಪ ಬಿರಾದಾರ, ಶಿವಾನಂದ ಬಿರಾದಾರ, ಉಜ್ವಲ ಡೊಳ್ಳಿ, ಚನ್ನಪ್ಪ ಕುರ್ಲೆ, ರವೀಂದ್ರ ಕೇಶೆಟ್ಟಿ, ಮಹಾದೇವ ಕರಮಳ, ಲಾಯಪ್ಪ ವಾಘಮೋರೆ, ಭೀಮು ಕಡಮನಿ, ಪ್ರಕಾಶ್ ಬತಗುಣಕಿ, ಭೀಮಾಶಂಕರ ಉಮ್ರಾಣಿ, ಭಾಗಣ್ಣ ಕೋಳಿ, ಖಾನಗೊಂಡ ಪಾಟೀಲ್, ರಮೇಶ್ ಕೋಳಿ, ಸಿದ್ರಾಮ್ ಕೋಳಿ, ಬಸವರಾಜ್ ಹೂಗಾರ, ಪುಟ್ಟು ತೇಲಿ ಸೇರಿದಂತೆ ರೈತರು ಇದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 