ಲೋಕದರ್ಶನ ವರದಿ
ಸಿಂದಗಿ 11: ಕೊವಿಡ್-19 ವೈರಸ್ ತಡೆಗಟ್ಟುವಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ ಇಲಾಖೆ ಹಾಗೂ ಆರೋಗ್ಯ ಇಲಾಖೆ, ಪೌರಕಾರ್ಮಿ ಕ ಸಿಬ್ಬಂದಿಗಳಿಗೆ ಇಲ್ಲಿನ ಆಕ್ಸಫರ್ಡ ಕ್ನನಡ ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದ್ದಿದ್ದಾರೆ.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಪ್ರಕಾಶ ಚೌಧರಿ ಮಾತನಾಡಿ, ಇಡೀ ದೇಶವೇ ಈ ವೈರಸ್ನಿಂದ ತಲ್ಲಣಗೊಂಡಿದೆ ಅದಕ್ಕಾಗಿ ಬಡವರು ಯಾರು ದೃತಿಗೆಡುವ ಅವಶ್ಯಕತೆಯಿಲ್ಲ. ಈ ವೈರಸ್ ನಿರ್ಣಾಮಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರ ಹಲವಾರು ರೀತಿಯ ಪ್ರಯತ್ನ ಮಾಡುತ್ತಿದೆ ಅಲ್ಲದೆ ಬಡ ಹಾಗೂ ಕೂಲಿ ಕಾರ್ಮಿಕರ ಉತ್ತೆಜನಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅವರಿಗೆ ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮನೆಯಲ್ಲಿಯೇ ಇದ್ದು ಅವರಿಗೆ ಸಹಕಾರ ನೀಡುವದಲ್ಲದೆ ನಮ್ಮ ಸುರಕ್ಷತೆಯನ್ನು ನಾವೇ ಕಾಪಾಡಿಕೊಳ್ಳಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಎ.ಎಸ್.ಪಾಟೀಲ ಯಾಳವಾರ, ಶಿವಣ್ಣ ಚೋರಗಸ್ತಿ, ಆನಂದ ಶಾಬಾದಿ, ಪಂಡಿತ ಯಂಪೂರೆ, ರಮೇಶ ಪೂಜಾರಿ ಸೇರಿದಂತೆ ಇನ್ನಿತರರು ಇದ್ದರು.