ಮಕ್ಕಳಲ್ಲಿ ಪ್ರತಿಭೆ ಮತ್ತು ಕೌಶಲ್ಯವನ್ನ ಪ್ರೇರೇಪಿಸುವ ವಸ್ತು ಪ್ರದರ್ಶನಗಳಾಗಬೇಕು : ಡಾ. ಮಲ್ಲಿಕಾರ್ಜುನಯ್ಯ
There should be exhibitions that inspire talent and skills in children: Dr. Mallikarjunaiah
ಶಿಗ್ಗಾವಿ 28 : ತಂತ್ರಜ್ಞಾನದ ಬೆಳವಣಿಗೆಯ ಜೊತೆಗೆ ನಾವು ನಮ್ಮ ಮಕ್ಕಳನ್ನ ತಯಾರಿ ಮಾಡಬೇಕಿದ್ದು ತಂತ್ರಜ್ಞಾನದ ಜ್ಞಾನವನ್ನ ನಮ್ಮ ಮಕ್ಕಳು ಅಳವಡಿಸಿಕೊಳ್ಳುವ ಅವಶ್ಯಕತೆಯಿದೆ ಎಂದು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜನಯ್ಯ ಹೇಳಿದರು. ಪಟ್ಟಣದ ಪೀನೀಕ್ಸ್ ಇಂಟರ್ ನ್ಯಾಷನಲ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ 2025-26 ರ ವಿಜ್ಞಾನದ ಕ್ರೀಯಾತ್ಮಕ ಚಟುವಟಿಕೆಗಳ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಲ್ಲಿರುವ ಪ್ರತಿಭೆ ಮತ್ತು ಕೌಶಲ್ಯಗಳನ್ನ ಪ್ರೇರೇಪಿಸುವ ಮೂಲಕ ಇಂದಿನ ತಂತ್ರಜ್ಞಾನದ ಮಹತ್ವದ ಜ್ಞಾನ ನಮ್ಮ ಮಕ್ಕಳಿಗೆ ಅವಶ್ಯವಾಗಿದ್ದು ಪೀನೀಕ್ಸ್ ಶಾಲೆ ದಾಪುಗಾಲು ಇಟ್ಟಿದೆ,
ದೇಶಾಭಿಮಾನ ಎಲ್ಲರಿಗೂ ಮುಖ್ಯ, ವಿಜ್ಞಾನ ನಮ್ಮ ದೈನಂದಿನ ಜೀವನದಲ್ಲಿ ಮುಖ್ಯವಾಗಿದೆ, ನಮ್ಮ ಆರೋಗ್ಯದ ದೃಷ್ಟಿಯಿಂದಲೂ ವಿಜ್ಞಾನ ಬಹಳಷ್ಟು ಸಹಕಾರಿಯಾಗಿದೆ, ನಮ್ಮ ವಿಜ್ಞಾನದ ಜ್ಞಾನ ನಮ್ಮ ಜೀವನಕ್ಕೆ ಪೂರಕವಾಗಿರಬೇಕೆ ಹೊರತು ಮಾರಕವಾಗಿರಬಾರದು, ಇಂತಹ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು ಎಂದರು. ಸಂಸ್ಥೆಯ ಕಾರ್ಯದರ್ಶಿ ಡಾ. ರಾಣಿ ತಿರ್ಲಾಪೂರ ಮಾತನಾಡಿ ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಸೃಜನಶೀಲತೆ ಮತ್ತು ಕುತೂಹಲವನ್ನು ಬೆಳೆಸುವ ಒಂದು ಪ್ರಮುಖ ಶೈಕ್ಷಣಿಕ ಕಾರ್ಯಕ್ರಮವಾಗಿದೆ ಅಲ್ಲದೇ ಹೊಸ ಆವಿಷ್ಕಾರಗಳನ್ನು ಪ್ರದರ್ಶಿಸಲು ಪ್ರಾಯೋಗಿಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ತಂಡದ ಕೆಲಸದ ಮೌಲ್ಯವನ್ನು ಕಲಿಯಲು ವೇದಿಕೆ ಕಲ್ಪಿಸುತ್ತದೆ.
ಶಾಲೆಗಳಲ್ಲಿ ಆಯೋಜಿಸಲಾಗುವ ಈ ಪ್ರದರ್ಶನಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ವಿಜ್ಞಾನ ಮತ್ತು ತಂತ್ರಜ್ಞಾನದತ್ತ ಆಸಕ್ತಿ ಮೂಡಿಸುತ್ತವೆ ಎಂದರು. ಪ್ರಾಚಾರ್ಯ ಗಿರಿಧರ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ನಡೆದ ಶಾಲೆಯ ವಿದ್ಯಾರ್ಥಿಗಳಿಂದ ರಚನೆಗೊಂಡ ವಿಜ್ಞಾನ ವಸ್ತುಪ್ರದರ್ಶನಗಳು ಎಲ್ಲರ ಗಮನ ಸೆಳೆದವು. ಸಂಸ್ಥೆಯ ಅದ್ಯಕ್ಷ ಡಾ. ಎಂ ಎಂ ತಿರ್ಲಾಪೂರ, ಉಪಾದ್ಯಕ್ಷ ನರಹರಿ ಕಟ್ಟಿ, ಕಾರ್ಯದರ್ಶಿ ಡಾ. ರಾಣಿ ತಿರ್ಲಾಪೂರ, ನಿರ್ದೇಶಕರಾದ ಸಿದ್ದನಗೌಡ ಪಾಟೀಲ, ಸುಮಿತ್ರಾ ಪಾಟೀಲ, ಲಕ್ಷ್ಮೀಬಾಯಿ ಕಟ್ಟಿ, ಸೇರಿದಂತೆ ಶಾಲೆಯ ಶಿಕ್ಷಕರು ಸಿಬ್ಬಂದಿಗಳು ಇದ್ದರು, ವಿದ್ಯಾರ್ಥಿಗಳಾದ ಹರ್ಷಿತಾ ಕಟ್ಟಿ ಸಂಗಡಿಗರು ಪ್ರಾರ್ಥಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 