ಬಡಜನರನ್ನು ಆರ್ಥಿಕ ಸಬಲರನ್ನಾಗಿಸುವ ಪಂಚಗ್ಯಾರಂಟಿ ಯೋಜನೆಗಳು ವಿತರಣೆಯಲ್ಲಿ ವಿಳಂಬ ಸಲ್ಲದು: ಪಾಟೀಲ
There should be no delay in the distribution of Panchagaranti schemes
ಗದಗ 28 : ಸರ್ಕಾರದಿಂದ ಜಾರಿಯಾಗಿರುವ ಪಂಚಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸದುದ್ದೇಶ ಹೊಂದಿದ್ದು ಈ ಯೋಜನೆಗಳ ಸೌಲಭ್ಯ ವಿತರಣೆಯಲ್ಲಿ ವಿನಾಕಾರಣ ವಿಳಂಬವಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಸಭೆಯ ಅಧ್ಯಕ್ಷರಾದ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಪ್ರಗತಿ ಪರೀಶೀಲನಾ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಪಂಚಗ್ಯಾರಂಟಿ ಯೋಜನೆಗಳ ಅನುಷ್ಟಾನವು ಆಡಳಿತ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬಹುದೊಡ್ಡ ಬದಲಾವಣೆಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನವು ಬಡಜನರ ಸೇವೆ ಮಾಡಲು ಒದಗಿಸಿದ ಬಹುದೊಡ್ಡ ಅವಕಾಶವಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಶ್ರದ್ಧೆಯಿಂದ ಕೆಲಸ ಮಾಡಬೇಕಾಗುತ್ತದೆ. ಬಡಜನರ ಸೇವೆ ಪವಿತ್ರ ಕೆಲಸವಾಗಿದ್ದು ಯೋಜನೆಗಳ ಸೌಲಭ್ಯಗಳು ನಿಗದಿತ ಅವಧಿಯಲ್ಲಿಯೇ ತಲುಪಿದಾಗ ಅದರ ಸಾರ್ಥಕತೆ ಕಾಣಬಹುದಾಗಿದೆ ಎಂದರು.
ಅರ್ಹ ಕುಟುಂಬಕ್ಕೆ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಮಾಸಿಕ 5,000 ರೂ.ಗಳು ದೊರೆಯುತ್ತಿದ್ದು ಪ್ರತಿ ವರ್ಷಕ್ಕೆ 60,000 ರೂ.ಗಳು ದೊರೆಯುತ್ತಿದೆ. ಬಡಜನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಮತ್ತು ಮೂಲಭೂತ ಸೌಕರ್ಯಗಳನ್ನು ಪಡೆಯಲು ಸಹಾಯವಾಗಿದೆ . ಗದಗ ಜಿಲ್ಲಾ ಮಟ್ಟದ ಪಂಚಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷರಾದ ಬಿ.ಬಿ.ಅಸೂಟಿ ಮಾತನಾಡಿ ಪಂಚ ಗ್ಯಾರಂಟಿ ಯೋಜನೆಗಳ ಗುರಿ ಶೆ 99.5 ರಷ್ಟು ಗುರಿ ತಲುಪಿದ್ದು ಗದಗ ಜಿಲ್ಲೆಯು ಶೇ 100 ರಷ್ಟು ಗುರಿ ಸಾಧಿಸಿ ರಾಜ್ಯದಲ್ಲಿ ಅಗ್ರಸ್ಥಾನ ಪಡೆಯಬೇಕು.
ಗದಗ ತಾಲೂಕು ಮಟ್ಟದ ಪಂಚಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಪಂಚಗ್ಯಾರಂಟಿ ಯೋಜನೆಗಳ ಸೌಲಭ್ಯ ವಿತರಣೆಯಲ್ಲಿ ಯಾವುದೇ ಸಮಸ್ಯೆಗಳು ಉಂಟಾದರೆ ಅಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿನಿಧಿಗಳ ಸಹಕಾರ ಸದಾಕಾಲ ಇರುತ್ತದೆ. ಅರ್ಹ ಫಲಾನುಭವಿಗಳು ಯೋಜನೆಗಳ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಉಪಾಧ್ಯಕ್ಷ ನೀಲಮ್ಮ ಬೋಳನವರ, ಸದಸ್ಯರುಗಳಾದ ಈರಣ್ಣ ಹುನಸಿಕಟ್ಟಿ, ಷರೀಫ್ ಬಿಳೆಯಲಿ, ತಾಲೂಕು ಗ್ಯಾರಂಟಿ ಸದಸ್ಯರುಗಳಾದ ದಯಾನಂದ ಪವಾರ, ಶಂಭು ಕಾಳೆ, ಸಾವಿತ್ರಿ ಹೂಗಾರ, ಸಂಗು ಕೆರಕಲಕಟ್ಟಿ, ಎನ್.ಬಿ.ದೇಸಾಯಿ ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ್, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಚಿಂಚಲಿ, ಗಣೇಶ ಸಿಂಗ್ ಮಿಟಾಡೆ, ಮಲ್ಲಪ್ಪ ಎಚ್ ಬಾರಕೇರ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಎಸ್.ಎನ್.ಬಳ್ಳಾರಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ, ಹಾಗೂ ಪಂಚಗ್ಯಾರಂಟಿ ಯೋಜನೆಗೆ ಸಂಬಂಧಿತ ಅಧಿಕಾರಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 