ಹುಕ್ಕೇರಿಯಿಂದ ಸ್ಪರ್ಧಿಸುವ ಬಗ್ಗೆ ಯಾವ ಚರ್ಚೆ ನಡೆದಿಲ್ಲ : ರಾಹುಲ್ ಜಾರಕಿಹೊಳಿ
ಬೆಳಗಾವಿ 10: ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದಿಂದ ತಾವು ಸ್ಪರ್ಧಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸಧ್ಯ ರಾಜಕೀಯಕ್ಕೆ ಕಾಲಿಟ್ಟದ್ದೆನೆ, ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ನನ್ನ ಗುರಿಯಾಗಿದೆ. ಸಚಿವರ ಸೂಚನೆಯಂತೆ ಪಕ್ಷದ ಸಂಘಟನೆಗಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಅವರು ಇಂದಿಲ್ಲಿ ಸ್ಪಷ್ಟನೆ ನೀಡಿದರು.
ಸೋಮವಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಕ್ಕೇರಿ ಮತ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ತಯಾರಿ ನಡೆಸಿರುವುದು ನಿಜವೇ ಎಂಬ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಜಾರಕಿಹೊಳಿ ಅವರು, ಹುಕ್ಕೇರಿ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ನುಡಿದರು. ಪಕ್ಷ ಜವಾಬ್ದಾರಿ ಸ್ಥಾನ ನೀಡಿದೆ, ಹೀಗಾಗಿ ಪಕ್ಷದ ಶಕ್ತಿ ಇನ್ನಷ್ಟೂ ಹೆಚ್ಚಿಸಲು ಎಲ್ಲಾ ಕಾರ್ಯಕರ್ತರ ವಿಶ್ವಾಸ ತೆಗೆದುಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷದ ಬಲ ವರ್ಧನೆಗೆ ನಿರಂತರ ಶ್ರಮಿಸಲಾಗುವುದು ಎಂದರು.
ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಬಹುಮತದಿಂದ ಆಯ್ಕೆಯಾಗಿದ್ದೆನೆ. ಮತದಾರರ ಆಶೀರ್ವಾದದಿಂದ ಸುಮಾರು 1 ಲಕ್ಷ 80 ಮತಗಳು ಬಂದಿದೆ. ಮತದಾರರು, ಯುವಕರ ಬೆಂಬಲವೇ ಪಕ್ಷದಲ್ಲಿ ಕೆಲಸ ಮಾಡಲು ಮತ್ತಷ್ಟೂ ಶಕ್ತಿ ಬಂದಿದೆ. ಪಕ್ಷ ಸಂಘಟನೆ ನಾವೆಲ್ಲರೂ ಹಗಲಿರುಳು ದುಡಿಯೋಣ, ಸರ್ಕಾರದ ಯೋಜನೆಯನ್ನು ಯುವಕರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಇದು ಯುವಕರ ಪಕ್ಷ ಎಲ್ಲಾ ಒಗ್ಗಟ್ಟಾಗಿ ಪಕ್ಷಕ್ಕೆ ಶಕ್ತಿ ತುಂಬವ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಪಕ್ಷಕ್ಕೆ ಯುವಕರ ಅಗತ್ಯವಿದೆ. ಹೀಗಾಗಿ ಹೆಚ್ಚೆಚ್ಚು ಯುವಕರು ಕಾಂಗ್ರೆಸ್‌ಗೆ ಸೇರೆ್ಡಯಾಗಬೇಕು. ತಂದೆಯವರ ಮಾರ್ಗದರ್ಶನದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಗಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷವನ್ನು ಬಲಗೊಳಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ ಮತದಾರರ ಹಾಗೂ ಜನರ ವಿಶ್ವಾಸ ಗಳಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಯುವಕರು "ಕೈ" ಜೋಡಿಸಿದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬಹುಮತ ಬಂದಿದೆ. ಆದರೆ, ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಬೇಕಿದೆ. ಹೀಗಾಗಿ ಯುವ ಆಯ್ಕೆ ಪ್ರಕ್ರಿಯೆ ಇವಾಗ ನಡೆದಿದೆ. ಮುಂದಿನ ದಿನಗಳ ವಿವಿಧ ರಾಜ್ಯಗಳಲ್ಲಿ ಪಕ್ಷ ಸಂಘಟನೆಗೆ ಹಗಲಿರುಳು ಶ್ರಮಿಸಲಾಗವುದು. ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಲು ಯುವ ಕಾಂಗ್ರೆಸ್, ಪಕ್ಷದ ಮುಖಂಡರು ಪ್ರತಿ ಬೂತ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಿ ಪಕ್ಷವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸುವ ಕುರಿತು ಚರ್ಚೆ ನಡೆಯುತ್ತಿದಿಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ದಿನಗಳ ರಾಜ್ಯಾದ್ಯಂತ ಪ್ರವಾಸಿ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿರು ಅಧ್ಯಕ್ಷ-ಉಪಾಧ್ಯಕ್ಷರ ಸಮ್ಮತಿಯೊಂದಿಗೆ ಪ್ರಮುಖ ಕ್ಷೇತ್ರ ಸೇರಿದಂತೆ, ಯುವಕರ ಸಂಘಟನೆಯೊಂದಿಗೆ ಸಮಾವೇಶ ಆಯೋಜಿಸುವ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಪ್ರದಾನ ಕಾರ್ಯದರ್ಶಿ ಪ್ರದೀಪ ಎಂ.ಜೆ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್, ಜಿಪಂ ಸದಸ್ಯರಾದ ಮಹಾಂತೇಶ ಮಗದುಮ್ಮ, ಬೆಳಗಾವಿ ಗ್ರಾಮೀಣ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತೀಕ್ ಪಾಟೀಲ್, ಬಸವರಾಜ ಶಿಗ್ಗಾಂವಿ, ಚಿಕ್ಕೋಡಿ ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷ ಸಿದ್ದಕಿ ಅಂಕಲಗಿ, ರಾಜಾ ಸಲೀಂ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಇತರರು ಇದ್ದರು.