ನಡೆದಾಡುವ ದೇವರು, ಪರಮಪೂಜ್ಯ ಸಿದ್ಧೇಶ್ವರ ಸ್ವಾಮಿಜಿ ಅವರ ತೃತೀಯ ಪುಣ್ಯ ಸ್ಮರಣೆ
Third Commemoration of the Walking God, His Holiness Siddheshwar Swamiji
ಹುಬ್ಬಳ್ಳಿ 05: ದಾನೇಶ್ವರಿ ಸಂಗೀತ ವಿದ್ಯಾಲಯದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಡೆದಾಡುವ ದೇವರು, ವಿಜಯಪುರ ಜ್ಞಾನಯೋಗಾಶ್ರಮದ ಪರಮಪೂಜ್ಯ ಸಿದ್ಧೇಶ್ವರ ಸ್ವಾಮಿಜಿ ಅವರ ತೃತೀಯ ಪುಣ್ಯ ಸ್ಮರಣೆ ನಿಮಿತ್ ಜ್ಞಾನಯೋಗಿ ಪರಮಪೂಜ್ಯ ಸಿದ್ಧೇಶ್ವರ ಸ್ವಾಮಿಜಿ ಅವರ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಪೂಜೆ ಸಲ್ಲಿಸಿ, ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವ ನುಡಿ ನಮನ ಸಲ್ಲಿಸಲಾಯಿತು.
ಶ್ರೀಗಳ ಗುಣಗಾನ ಮಾಡಲಾಯಿತು. ದಾನೇಶ್ವರಿ ಸಂಗೀತ ವಿದ್ಯಾಲಯದ ಶಿಕ್ಷಕಿ ಹಾಗೂ ಮಕ್ಕಳು ಶ್ರದ್ಧಾ, ಭಕ್ತಿಯಿಂದ ಸಂಗೀತ, ವಚನಗಳನ್ನು ಹಾಡುವುದರ ಮೂಲಕ ಗೌರವಾರೆ್ಣ ಸಲ್ಲಿಸಲಾಯಿತು. ದಾನೇಶ್ವರಿ ಸಂಗೀತ ಪಾಠಶಾಲೆಯ ಸಂಗೀತ ಶಿಕ್ಷಕಿ, ಕನ್ನಡ ಪ್ರಾಧ್ಯಾಪಕಿ ಪ್ರೊ ಶೋಭಾ ಜಾಬಿನ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ನಿವೃತ್ ಪ್ರಾಚಾರ್ಯ ಪ್ರೊ ಎಸ್.ಎಂ.ಸಾತ್ಮಾರ, ಸೋಹನ ಸುರೇಶ ಹೊರಕೇರಿ, ಸುಜಯ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ,
ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಡಾ ಕವಿತಾ, ಶ್ವೇತಾ, ವೇದಾ, ಚಾರ್ವಿ, ಅಚ್ಚುತ, ಇಶಾನ್, ಸನ್ಮಯಿ, ಸಿಂಚನಾ, ಕಾರ್ಣಿಕ್, ಆವನಿ, ತಾನ್ವಿ, ಸಾನ್ವಿ, ಸಾತ್ವಿಕ್, ಅಹನಾ , ಆಯುಷ್, ಇಂಜಿನಿಯರ್ ಮಲ್ಲಿಕಾರ್ಜುನ ಜಾಬಿನ, ಡಾ. ಮಿನಲ್ ಸಾಳುಂಕೆ, ಸೇರಿದಂತೆ ಮುಂತಾದವರು ಭಾಗವಹಿಸಿದ್ದರು. ದಾನೇಶ್ವರಿ ಸಂಗೀತ ಪಾಠಶಾಲೆಯ ಮಕ್ಕಳು ವಚನ ಗಾಯನ ಪ್ರಸ್ತುತಪಡಿಸಿದರು. ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಮಾತನಾಡಿ ಸಿದ್ದೇಶ್ವರ ಶ್ರೀಗಳು ಸಮಾಜಕ್ಕೆ ಅಧ್ಯಾತ್ಮಿಕ ಪ್ರವಚನಗಳ ಮೂಲಕ ಸಲ್ಲಿಸಿದ ಸೇವೆಯನ್ನು ಶ್ರದ್ಧಾ, ಭಕ್ತಿಯಿಂದ ಸ್ಮರಿಸಿದರು. ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ದಾನೇಶ್ವರಿ ಸಂಗೀತ ವಿದ್ಯಾಲಯದ ಸಹಯೋಗದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 