ಪುಟ್ಬಾಲ್ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ
Third place in football tournament
ಲೋಕದರ್ಶನ ವರದಿ
ಧಾರವಾಡ 19: ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆಯ ತಂಡ ದಾವಣಗೆರೆ ಪಿ.ಎಸ್.ಎಸ್ ಇ.ಎಂ.ಆರ್ ಶಾಲೆಯಲ್ಲಿ ನಡೆದ 8ನೇ ಸಿ.ಬಿ.ಎಸ್.ಇ ಕ್ಲಸ್ಟರ್ ಪುಟ್ಬಾಲ್ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ. ಕರ್ನಾಟಕದಾದ್ಯಂತ 134 ಶಾಲೆಗಳು ಭಾಗವಹಿಸಿದ್ದವು. ಸಾಧನೆಗೈದ 15 ಜನರ ವಿದ್ಯಾರ್ಥಿ ತಂಡವನ್ನು, ಕೋಚ್ ಗಣೇಶ ಹಾಗೂ ಶಿವಾನಂದರವರನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಶ್ರೀ ಮಹಾವೀರ ಉಪಾದ್ಯೆ, ಪ್ರಾಚಾರ್ಯೆ ರಜನಿ ಪಾಟೀಲ್ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 