ಯಾವುದೇ ದೂರದೃಷ್ಟಿಕೋನ ಮತ್ತು ಅಭಿವೃದ್ಧಿ ಕಣ್ಣೋಟ ಇಲ್ಲ ಎಂಬುದು ಈ ಬಜೆಟ್‌ನಲ್ಲಿ ಸಾಬೀತಾಗಿದೆ : ಬಸವರಾಜ ಎಸ್

This budget has proven that there is no vision and development vision: Basavaraja S

ಯಾವುದೇ ದೂರದೃಷ್ಟಿಕೋನ ಮತ್ತು ಅಭಿವೃದ್ಧಿ ಕಣ್ಣೋಟ ಇಲ್ಲ ಎಂಬುದು ಈ ಬಜೆಟ್‌ನಲ್ಲಿ ಸಾಬೀತಾಗಿದೆ : ಬಸವರಾಜ ಎಸ್ 

ಹಾವೇರಿ 8: ಶಿಕ್ಷಣ ಕ್ಷೇತ್ರಕ್ಕೆ ಕೇವಲ 45,286 ಕೋಟಿ ರೂಪಾಯಿ 10ಅ ಹಣ ಮೀಸಲಿಟ್ಟಿದೆ. ಈ ಬಜೆಟ್ ನಲ್ಲಿ  ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ಶಿಕ್ಷಣವನ್ನು ಗ್ಯಾರಂಟಿ ಪಟ್ಟಿಗೆ ಸೇರಿಸಬೇಕಿತ್ತು. ಶಿಕ್ಷಣ ವ್ಯವಸ್ಥೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಯಾವುದೇ ದೂರದೃಷ್ಟಿಕೋನ ಮತ್ತು ಅಭಿವೃದ್ಧಿ ಕಣ್ಣೋಟ ಇಲ್ಲ ಎಂಬುದು ಈ ಬಜೆಟ್‌ನಲ್ಲಿ ಸಾಬೀತಾಗಿದೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಆರೋಪಿಸಿದ್ದಾರೆ. ಈ ಕುರಿತು  ಪತ್ರಿಕಾ ಹೇಳಿಕೆ ನೀಡಿದ ಅವರು ವಸತಿ ನಿಲಯದ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಕನಿಷ್ಠ 3, 500 ರೂ ಗಳಿಗೆ ಹೆಚ್ಚಿಸಬೇಕೆಂದು ಬೇಡಿಕೆಯ ನೀರೀಕ್ಷೆ ಹುಸಿಯಾಗಿದ್ದು, ಸಮಾಜ ಕಲ್ಯಾಣ, ಬಿಸಿಎಮ್, ಅಲ್ಪಾ ಸಂಖ್ಯಾತರ ಕಲ್ಯಾಣ ಇಲಾಖೆಗಳಡಿ ಇರುವ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮಾಸಿಕ ಬೋಜನ ವೆಚ್ಚವನ್ನು ಬೆಲೆ ಏರಿಕೆ ದಿನಗಳಲ್ಲೂ ಹೆಚ್ಚಳ ಮಾಡದಿರುವುದು ಖಂಡನೀಯ.   ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಪೌಷ್ಠಿಕ ಆಹಾರ ಒದಗಿಸಲು ಅಸಾಧ್ಯವಾಗುತ್ತದೆ. ನೂತನವಾಗಿ 26 ಹೋಬಳಿಗಳಲ್ಲಿ ಎಸ್ಸಿ/ಎಸ್ಟಿ ಹೊಸ ವಸತಿ ಶಾಲೆಗಳ,ಎಸ್ಟಿ 20 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು, ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ವಸತಿ ನಿಲಯಗಳು,  34 ವಿದ್ಯಾರ್ಥಿನಿಲಯಗಳಿಗೆ 238 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್‌-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ. ಅತ್ಯಂತ ಹಿಂದುಳಿದ 46 ಅಲೆಮಾರಿ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ. ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ರಿಪೇರಿ/ದುರಸ್ತಿ ಮಾಡಲು ?25 ಕೋಟಿ. ಘೋಷಣೆ ಮಾಡಿದ್ದು,ಎಸ್‌ಎಫ್‌ಐ ಹೋರಾಟದ ಪ್ರತಿಫಲವಾಗಿದ್ದು ಸರ್ಕಾರಕ್ಕೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.