ದಾಂಪತ್ಯ ಜೀವನದಲ್ಲಿ ಸಮಸ್ಯೆ ಎದುರಾದವರು ಧೈರ್ಯ ಕಳೆದುಕೊಳ್ಳದೆ ಹೊಸ ಬದುಕಿನತ್ತ ಹೆಜ್ಜೆ ಇಡಲಿ
Those facing problems in their married life should not lose courage but instead step towards a new
ಲೋಕದರ್ಶನ ವರದಿ
ಬೆಳಗಾವಿ, ಸೆ. 27: ಜೀವನದಲ್ಲಿ ದಾಂಪತ್ಯಕ್ಕೆ ಬಹುದೊಡ್ಡ ಮಹತ್ವವಿದೆ. ಧರ್ಮ, ಅರ್ಥ, ಕಾಮ, ಮೋಕ್ಷ ಎಂಬ ಚತುರ್ದ್ವಿಧ ಪುರುಷಾರ್ಥಗಳಲ್ಲಿ ದಾಂಪತ್ಯ ಜೀವನವೂ ಪ್ರಮುಖ ಪಾತ್ರ ವಹಿಸುತ್ತದೆ.
ಹೀಗಾಗಿ ಸೂಕ್ತ ಸಂಗಾತಿಯ ಆಯ್ಕೆ ಅತ್ಯಂತ ಮಹತ್ವದ್ದಾಗಿದ್ದು, ಕಾರಣಾಂತರಗಳಿಂದ ವಿವಾಹ ವಿಳಂಬವಾದರೂ ಅಥವಾ ದಾಂಪತ್ಯ ಜೀವನದಲ್ಲಿ ವಿಚ್ಛೇದನ ಉಂಟಾದರೂ ಮನೋಸ್ಥೈರ್ಯ ಕಳೆದುಕೊಳ್ಳದೆ ಭರವಸೆಯ ಹೆಜ್ಜೆ ಇಡಬೇಕು ಎಂದು ಡಾ. ಗುರುದೇವಿ ಹುಲಪ್ಪನವರಮಠ ಹೇಳಿದರು.
ಶಿವಬಸವ ನಗರದಲ್ಲಿರುವ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಕೆಎಲ್‌ಇ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ವಿಧವೆ, ವಿಧುರ ಹಾಗೂ ವಿಚ್ಛೇದಿತರಿಗಾಗಿ ನಡೆದ 13ನೇ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ಜೀವನ ಸಂಗಾತಿಯ ಸೂಕ್ತ ಆಯ್ಕೆ ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆ ಹಾಗೂ ಕೆಎಲ್‌ಇ ಸಂಸ್ಥೆಗಳು ಪ್ರತಿವರ್ಷ ವಧು-ವರರ ಹಾಗೂ ಮರುಮದುವೆಯಾಗುವವರ ಸಮ್ಮೇಳನಗಳನ್ನು ಆಯೋಜಿಸುವ ಮೂಲಕ ಸೂಕ್ತ ಅವಕಾಶ ಕಲ್ಪಿಸುತ್ತಿವೆ. ಸಮಾಜದ ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಂಕಣ ಭಾಗ್ಯ ದೊರೆತಿದ್ದರೂ ಕಾರಣಾಂತರಗಳಿಂದ ಸಂಗಾತಿಯನ್ನು ಕಳೆದುಕೊಂಡು ಒಂಟಿಯಾಗಿರುವವರಿಗೆ ಹೊಸ ಬದುಕು ಕಟ್ಟಿಕೊಳ್ಳಲು ಇಂತಹ ಸಮ್ಮೇಳನಗಳು ಸಹಕಾರಿಯಾಗುತ್ತವೆ. ಇಂತಹ ಕಾರ್ಯಕ್ರಮಗಳಿಂದ ಸೂಕ್ತ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಲು ಮತ್ತಷ್ಟು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಡಾ. ಪ್ರಭಾಕರ ಕೋರೆ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಸ್ಮರಿಸಿದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 