'ಮದ್ಯಪಾನದಂತಹ ಚಟ ಅಂಟಿಸಿಕೊಂಡವರಿಗೆ ಭವಿಷ್ಯದ ಚಿಂತನೆ ಇರುವುದಿಲ್ಲ'
ಲೋಕದರ್ಶನ ವರದಿ
ಮೂಡಲಗಿ 23: ಮದ್ಯಪಾನದಂತಹ ಚಟ ಅಂಟಿಸಿಕೊಂಡವರಿಗೆ ಭವಿಷ್ಯದ ಚಿಂತನೆಯಾಗಲಿ, ಕಲ್ಪನೆಯಾಗಲಿ ಇರುವುದಿಲ್ಲ. ಮದ್ಯಪಾನದ ಭೂತ ಶರೀರವನ್ನು ಬಿಟ್ಟು ಹೋದ ಮೇಲೆ ಅದರ ದಾಸರಾಗಿದ್ದವರು ತಮ್ಮನ್ನು ತಾವು ಕಂಡು ಮರುಕ ಪಡುತ್ತಾರೆ ಎಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಳಗಾವಿ ನಿದರ್ೇಶಕ ಸುರೇಶ ಮೊಯಿಲಿ ಹೇಳಿದರು.
ಅವರು ಸಮೀಪದ ಮಮದಾಪೂರ ಏಳುಕೋಣಿ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ(ರಿ) ಮೂಡಲಗಿ ವಲಯ, ಅಖಿಲ ಕನರ್ಾಟಕ ಜನಜಾಗೃತಿ ವೇದಿಕೆ, ಬೆಂಗಳೂರು ಕನರ್ಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಮದ್ಯವರ್ಜನ ವ್ಯವಸ್ಥಾಪನ ಸಮಿತಿ, ಕೌಜಲಗಿ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ 1303ನೇ ಮದ್ಯವರ್ಜನ ಶಿಬಿರದ ಸಮರೋಪ ಸಮಾರಂಭದಲ್ಲಿ ಮಾತನಾಡುತ್ತ, ಇತ್ತಿಚಿನ ದಿನಗಳಲ್ಲಿ ಯುವಜನತೆ ದುಶ್ಚಟಕ್ಕೆ ಬಲಿಯಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕನರ್ಾಟಕ ಜನಜಾಗೃತಿ ವೇದಿಕೆಯೂ ಜನಸಾಮಾನ್ಯರು ಇಂತಹ ದುಶ್ಚಟಕ್ಕೆ ಬಲಿಯಾಗಬಾರದು ಎಂಬ ಉದ್ದೇಶದಿಂದ ಮದ್ಯವರ್ಜನ ಶಿಬಿರವನ್ನು ನಡೆಸಿಕೊಂಡು ಬಂದಿದೆ. ಇಂತಹ ಕಾರ್ಯಕ್ರಮಗಳು ಸಾವಿರಾರು ಕುಟುಂಬಗಳ ಜೀವನಕ್ಕೆ ಬೆಳಕಾಗಿದ್ದು ಇಂತಹ ಕಾರ್ಯಕ್ರಮಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ದೇವರಾಜ್, ಶಿಬಿರಾಧಿಕಾರಿ ದೇವಿಪ್ರಸಾದ, ಆರೋಗ್ಯ ಸಹಾಯಕಿ ಪ್ರಸಿಲ್ಲಾ, ಈರಪ್ಪ ಸೊಂಡುರ, ಹನುಮಂತ ಗೋಪಾಳಿ, ಮಹಾಂತೇಶ ಜನ್ಮಟ್ಟಿ, ಸದಾಶಿವ ಸೊಂಡುರ,ರವಿ ಕಮತೆ, ಸುರೇಶಗೌಡ ಪಾಟೀಲ ಮತ್ತಿತರರು ಭಾಗವಹಿಸಿದ್ದರು.
ಮಮದಾಪೂರದ ವೇದಮೂತರ್ಿ ಚರಮೂತರ್ೇಶ್ವರ ಮಹಾಸ್ವಾಮಿಜೀ, ಶಾಂತರೂಡ ಸ್ವಾಮಿಜೀ ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿದರು. ಮದ್ಯವರ್ಜನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುರೇಶಗೌಡ ಪಾಟೀಲ ಅಧ್ಯಕ್ಷತೆವಹಿಸಿದ್ದರು. ಮದ್ಯವರ್ಜನ ಶಿಬಿರದಲ್ಲಿ 93 ಶಿರಾಥರ್ಿಗಳು ಮದ್ಯವಜರ್ಿಸಿ ನವಜೀವನಕ್ಕೆ ಪಾದರ್ಪಣೆ ಮಾಡಿದರು. ಕಾರ್ಯಕ್ರಮವನ್ನು ಮೇಲ್ವಿಚಾರಕ ಬಾಬುರಾವ ಗೋಣಿ ನಿರೂಪಿಸಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 