ವಿಜಯಪುರ 24: ಜಿಲ್ಲಾಡಳಿತ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಸವರ್ೇಕ್ಷಣಾಧಿಕಾರಿಗಳ ಸಹಯೋಗದಲ್ಲಿ ಇಂದು ನಗರದ ಜಿಲ್ಲಾ ಸವೇಕ್ಷಣಾಧಿಕಾರಿಗಳ ಕಾಯರ್ಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗಾಗಿ ಕೋವಿಡ್-19 ಮುನ್ನೆಚ್ಚರಿಕೆಯಾಗಿ ವೈದ್ಯಕೀಯ ತಪಾಸಣೆ ಅಂಗವಾಗಿ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಲಾಯಿತು.
ಜಿಲ್ಲಾ ಕೇಂದ್ರದ 28 ಜನ ಮಾಧ್ಯಮ ಪ್ರತಿನಿಧಿಗಳ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ.
ಅದರಂತೆ ನಾಳೆ ಬೆಳಿಗ್ಗೆ 11.30 ರಿಂದ ಸಂಜೆ 4.00 ಗಂಟೆಯವರೆಗೆ ಈ ಶಿಬಿರ ಆಯೋಜಿಸಲಾಗಿದ್ದು, ಜಿಲ್ಲಾ ಕೇಂದ್ರದಲ್ಲಿರುವ ಸಮೂಹ ಮಾಧ್ಯಮದ ಪ್ರತಿನಿಧಿಗಳು ಇದರ ಸದುಪಯೋಗ ಪಡೆಯಬಹುದಾಗಿದೆ. ಸಕರ್ಾರದ ನಿದರ್ೇಶನದಂತೆ ಜಿಲ್ಲಾ ಕೇಂದ್ರದ ಮಾಧ್ಯಮ ಪ್ರತಿನಿಧಿಗಳ ಗಂಟಲು ದ್ರವ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರ ನಿದರ್ೇಶನದಂತೆ ಜಿಲ್ಲಾ ಸವರ್ೇಕ್ಷಣಾಧಿಕಾರಿಗಳಾದ ಡಾ.ಎಂ.ಬಿ ಬಿರಾದಾರ ನೇತೃತ್ವದ ಹಿರಿಯ ಮತ್ತು ಕಿರಿಯ ಪ್ರಯೋಗಶಾಲಾದ ಸುಮಾರು 24ಕ್ಕೂ ಹೆಚ್ಚು ಟೆಕ್ನಾಲಾಜಿಸ್ಟ್ಗಳ ತಂಡದ ಮೂಲಕ ಈ ಕಾರ್ಯವನ್ನು ನೆರವೇರಿಸಲಾಯಿತು.