ಶ್ರಾವಣದಲ್ಲಿ ಖಿಲೇಗಾಂವ ಬಸವೇಶ್ವರ ದೇಗುಲಕ್ಕೆ ಭಕ್ತರ ದಂಡು
Throngs of devotees visit the Khilegaon Basaveshwara temple during Shravana
ಸಂಬರಗಿ, ಆ.28: ಕರ್ನಾಟಕ ಹಿ ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಖಿಲೇಗಾಂವ ಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಪ್ರತಿದಿನ 30ರಿಂದ 40 ಸಾವಿರಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ಭಕ್ತರು ಸರತಿ ಸಾಲಿನಲ್ಲಿ ನಿಲ್ಲದಂತೆ ದೇವಸ್ಥಾನ ಆಡಳಿತ ಮಂಡಳಿ ಅಗತ್ಯ ವ್ಯವಸ್ಥೆಗಳನ್ನು ಕೈಗೊಂಡಿದೆ.
ಸಂಗಮನಾಥ ದೇವಸ್ಥಾನದಿಂದ ನೀರು ತಂದು ಬಸವೇಶ್ವರನಿಗೆ ದಿನಕ್ಕೆ ಮೂರು ಬಾರಿ ಅಭಿಷೇಕ ಹಾಗೂ ಪೂಜೆ ನೆರವೇರಿಸಲಾಗುತ್ತಿದೆ. ಬೆಳಗಿನ 4 ಗಂಟೆಗೆ ವಿಶೇಷ ಪೂಜೆ ನಡೆಯುತ್ತಿದ್ದು, ಸರತಿ ಮೂಲಕ ಎಲ್ಲ ಭಕ್ತರಿಗೂ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಶ್ರಾವಣ ಮಾಸದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಾತ್ರಾ ಪ್ರದೇಶದಾದ್ಯಂತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಯಾತ್ರೆಯಲ್ಲಿ ನಡೆಯುವ ಚಟುವಟಿಕೆಗಳನ್ನು ಒಂದೇ ಸ್ಥಳದಿಂದ ವೀಕ್ಷಿಸುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ಅಥಣಿ ಘಟಕದಿಂದ ಪ್ರತಿ ಗಂಟೆಗೊಂದು ಬಸ್ ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ಮಹಿಳಾ ಭಕ್ತರಿಗೆ ಹೆಚ್ಚಿನ ಅನುಕೂಲವಾಗಿದೆ. ಮಹಿಳೆಯರ ಸಂಖ್ಯೆಯೂ ಹೆಚ್ಚಾಗಿ ಕಂಡುಬರುತ್ತಿದೆ. ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಯಾತ್ರಾ ಸಮಿತಿ ಕ್ರಮ ಕೈಗೊಂಡಿದೆ.
ಹೊರಗಿನಿಂದ ಆಗಮಿಸುವ ಯಾತ್ರಿಕರಿಗಾಗಿ ವಸತಿ ನಿಲಯದ ವ್ಯವಸ್ಥೆ ಕಲ್ಪಿಸಲಾಗಿದ್ದು, ರಿಯಾಯಿತಿ ದರದಲ್ಲಿ ವಸತಿ ಸೌಲಭ್ಯ ನೀಡಲಾಗುತ್ತಿದೆ. ಭಕ್ತರಿಗೆ ಅಗತ್ಯವಾದ ಎಲ್ಲ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಒದಗಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 