ವಿದ್ಯಾರ್ಥಿಗಳಿಗೆ ಸಮಯ ನಿರ್ವಹಣೆ ಕೌಶಲ್ಯ ಬಹುಮುಖ್ಯ
Time management skills are very important for students
ಹುಲಕೋಟಿ 13 : ವಿದ್ಯಾರ್ಥಿಗಳು ಒತ್ತಡ ನಿರ್ವಹಣೆ, ಆರೋಗ್ಯ ರಕ್ಷಣೆ, ಸಮಯ ನಿರ್ವಹಣೆ, ಏಕಾಗ್ರತೆ ಕೌಶಲ್ಯಗಳನ್ನು ಸರಿಯಾಗಿ ಅಳವಡಿಸಿಕೊಳ್ಳಲು ವ್ಯವಸ್ಥಿತ ದಿನಚರಿ ಹೊಂದುವುದು ಅವಶ್ಯವಿದ್ದು, ಸಮಯವನ್ನು ಉತ್ತಮವಾಗಿ ಬಳಸಿಕೊಂಡರೆ ಬದುಕಿನಲ್ಲಿ ಯಶಸ್ಸು ಪಡೆಯಲು ಸಾಧ್ಯವೆಂದು ಹಳಿಯಾಳ ತಾಲ್ಲೂಕಿನ ಕೆ.ಕೆ. ಹಳ್ಳಿಯ ಅಭಿನವ ಸಿದ್ಧಾನಂದ ಸ್ವಾಮೀಜಿ ಹೇಳಿದರು. ಅವರು ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕವು ಆಯೋಜಿಸಿದ್ದ ‘ಒತ್ತಡ ನಿರ್ವಹಣೆಗೆ ಉತ್ತಮ ದಿನಚರಿ ಅಗತ್ಯ’ ಕಾರ್ಯಕ್ರಮದಲ್ಲಿ ಮಾತನಾಡುತ್ತ, ವಿದ್ಯಾರ್ಥಿಗಳು ಪರಿಶ್ರಮದಿಂದ ಅಧ್ಯಯನ ಮಾಡುತ್ತ ಗುರಿಯನ್ನು ತಲುಪಲು ನಿರಂತರ ಪ್ರಾಮಾಣಿಕ ಪ್ರಯತ್ನ, ಸಕಾರಾತ್ಮಕ ದೃಷ್ಟಿಕೋನ, ಗುರುಹಿರಿಯರ ಮಾರ್ಗದರ್ಶನ, ಸರಿಯಾದ ನಿರ್ಧಾರಗಳಿಂದ ಸವಾಲುಗಳನ್ನು ಸಮತಾಭಾವದಿಂದ ಎದರಿಸುವ ಕಲೆಯನ್ನು ಸಿದ್ಧಿಸಿಕೊಂಡಂರೆ ಅವಕಾಶಗಳು ಹುಡುಕಿಕೊಂಡು ಬರುತ್ತವೆಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಪ್ರೊ. ಸುಧಾ ಕೌಜಗೇರಿ ವಿದ್ಯಾರ್ಥಿಗಳು ಸಮಯದ ಬೆನ್ನಹತ್ತದೆ ಅದನ್ನು ದುಡಿಸಿಕೊಳ್ಳುವ ಸಾಮರ್ಥ್ಯ ಬೆಳೆಸಿಕೊಳ್ಳಲು ಉತ್ತಮ ದಿನಚರಿ ಹೊಂದುವುದು ಅಗತ್ಯವೆಂದು ಹೇಳಿದರು. ಎನ್.ಎಸ್.ಎಸ್. ಘಟಕದ ಕಾರ್ಯಕ್ರಮ ಅಧಿಕಾರಿ ಪ್ರೊ. ಅಪ್ಪಣ್ಣ ಹಂಜೆ ವಿದ್ಯಾರ್ಥಿಗಳಿಗೆ ಗುರು, ಗುರಿ, ಛಲ ಯಶಸ್ಸಿನ ಸೂತ್ರಗಳಾಗಿದ್ದು, ಶರೀರ ಮತ್ತು ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡು ಸಮಯ ನಿರ್ವಹಣೆ ಕಲೆಯನ್ನು ಮೈಗೂಡಿಸಿಕೊಂಡರೆ ಯಶಸ್ಸು ಕಣ್ಮುಂದೆ ಬಂದು ನಿಲ್ಲತ್ತದೆಂದು ಹೇಳಿದರು. ಸಾಂಸ್ಕೃತಿಕ ವಿಭಾಗದ ಸಂಯೋಜಕ ರಮೇಶ ಹುಲಕುಂದ ಕಾರ್ಯಕ್ರಮ ನಡೆಸಿಕೊಟ್ಟರು. ಕ್ರೀಡಾ ವಿಭಾಗದ ಮಹಾಂತೇಶ ವಂದನಾರೆ್ಣಗೈದರು. ಸ್ವಾಮೀಜಿ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಬೋಧಕರು, ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 