ಅಪೂರ್ಣ ಅರ್ಜಿ ಪೂರ್ಣಗೊಳಿಸಲು ಜ.5ರವರೆಗೆ ಕಾಲಾವಕಾಶ
ಹಾವೇರಿ 30 : ಹಾವೇರಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಭರ್ತಿಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ ಸಂದರ್ಭದಲ್ಲಿ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿ ಪೂರ್ಣಗೊಳಿಸಲು ಜನವರಿ 5ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 472 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 149 ಅರ್ಜಿಗಳು ಪೂರ್ಣಗೊಂಡಿದ್ದು, 323 ಅಭ್ಯರ್ಥಿಗಳು ಅರ್ಜಿಗಳು ಅಪೂರ್ಣಗೊಂಡಿವೆ. ಅಂಗನವಾಡಿ ಸಹಾಯಕಿಯರ ಹುದ್ದೆಗೆ 492 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 225 ಅರ್ಜಿಗಳು ಪೂರ್ಣಗೊಂಡಿದ್ದು, ಉಳಿದ 267 ಅಭ್ಯರ್ಥಿಗಳ ಅರ್ಜಿಗಳು ವಿವಿಧ ಕಾರಣಗಳಿಂದ ಅಪೂರ್ಣಗೊಂಡಿವೆ.
ಈ ಅಪೂರ್ಣಗೊಂಡ ಅರ್ಜಿಗಳನ್ನು ಪೂರ್ಣಗೊಳಿಸಲು 05-01-2025ರವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಣಣಠಿ//ಞಚಿಡಿಟಿಜಟಚಿಞಚಿಠಜ.ಞಚಿಡಿ.ಟಿಛಿ.ಟಿ/ಚಿಛಛಿಜ/ ಮೂಲಕ ನಿಗಧಿತ ಅವಧಿಯಲ್ಲಿ ಅಪೂರ್ಣಗೊಂಡ ಅರ್ಜಿಗಳನ್ನು ಪೂರ್ಣಗೊಳಿಸಬೇಕು.
ಅಪೂರ್ಣಗೊಂಡ ಅರ್ಜಿಗಳ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಅಳವಡಿಸಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ದೂರವಾಣಿ 08375-232164 ಸಂಪರ್ಕಿಸಲು ಕೋರಲಾಗಿದೆ.