ಲೋಕದರ್ಶನ ವರದಿ
ಯಲ್ಲಾಪುರ 10: ಸಕರ್ಾರ ಟಿಪ್ಪು ಜಯಂತಿಯನ್ನು ಆಚರಿಸುವ ಕೂಡದು, ಜನರ ವಿರೋಧದ ಮಧ್ಯೆ ಸಕರ್ಾರ ಟಿಪ್ಪು ಜಯಂತಿ ಆಚರಿಸುವುದನ್ನು ತಾವು ವಿರೋಧಿಸುವುದಾಗಿ ಘೋಷಣೆ ಕೂಗುತ್ತಾ ಕೆಲವು ಸಂಘಟನೆಯ ಪ್ರಮುಖರು ಶನಿವಾರ ಬೆಳಗ್ಗೆ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಪಟ್ಟಣ ಪಂಚಾಯಿತಿ ಸದಸ್ಯ ಸೋಮೇಶ್ವರ ನಾಯ್ಕ ನೇತೃತ್ವದಲ್ಲಿ ಸುಮಾರು 15ಕ್ಕೂ ಹೆಚ್ಚು ಜನ ಮುಂಡಗೋಡ ರಸ್ತೆಯ ಮೂಲಕ ಅಂಬೇಡ್ಕರ್ ವೃತ್ತವನ್ನು ಪ್ರವೇಶಿಸಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದರು.
ಪೊಲೀಸ್ ನಿರೀಕ್ಷಕ ಡಾ. ಮಂಜುನಾಥ ನಾಯಕ ನೇತೃತ್ವದಲ್ಲಿ ಸಿಬ್ಬಂದಿಗಳು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಎಪಿಎಂಸಿ ಅಡುಗೆ ವಾಹನದಲ್ಲಿ ತೆಗೆದುಕೊಂಡು ಹೋದರು.
ಶನಿವಾರ ಮತ್ತು ರವಿವಾರ ಪಟ್ಟಣದಲ್ಲಿ ಯಾವುದೇ ಪ್ರತಿಭಟನೆ ಮೆರವಣಿಗೆ ಘೋಷಣೆ ಕೂಗುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು. ಈ ಆದೇಶವನ್ನು ಧಿಕ್ಕರಿಸಿ ಯುವಕರು ಟಿಪ್ಪು ಜಯಂತಿ ಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.