ಟಿಪ್ಪು ಜಯಂತಿ : ಎರಡು ಗುಂಪಿನ ನಡುವೆ ಭುಗಿಲೆದ್ದ ಸಂಘರ್ಷ, 40 ಜನರ ಮೇಲೆ ಪ್ರಕರಣ
Tipu Jayanti: Conflict broke out between two groups, case against 40 people
ರಬಕವಿ-ಬನಹಟ್ಟಿ 27: ಟಿಪ್ಪು ಜಯಂತಿ ಕಾರ್ಯಕ್ರಮ ಹಿನ್ನಲೆಯಲ್ಲಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಕಟ್ಟಿದ್ದ ಹಸಿರು ರಿಬ್ಬನ್ ಹರಿದು ಹಾಕಿದ್ದಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದ ಘಟನೆ ಪರಿಣಾಮ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ 40 ಜನರ ಮೇಲೆ ಸ್ವಯಂ ಪ್ರಕರಣ ದಾಖಲಿಸಿಕೊಂಡ ವರದಿಯಾಗಿದೆ.
ಪ್ರತಿವರ್ಷದಂತೆ ಹೊಸೂರಿನಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತಿತ್ತು. ಎರಡು ಗುಂಪುಗಳಾಗಿ ಜಯಂತಿ ಆಚರಣೆ ಇಲ್ಲಿ ನಡೆಯುತ್ತಿದ್ದವು. ರಿಬ್ಬನ್ ಹರಿದ ಪರಿಣಾಮ ಒಂದು ಗುಂಪಿನ ವ್ಯಕ್ತಿಯೇ ಕಾರಣವೆಂದು ತಿಳಿದು ಮಂಗಳವಾರ ರಾತ್ರಿ 10-30ರ ಸುಮಾರಿಗೆ ಹೊಸೂರಿನ ಬನಶಂಕರಿ ದೇವಸ್ಥಾನ ಹತ್ತಿರದ ರಸ್ತೆಯಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ಕೆಲವರ ಮೇಲೆ ಹಲ್ಲೆ ನಡೆದಿದೆ.
ಕಾರಣ : ಮೂರಾ್ನಲ್ಕು ವರ್ಷಗಳಿಂದ ಅಂಜುಮನ್ ಸಂಸ್ಥೆಯ ಲೆಕ್ಕಪತ್ರ ಕೇಳಿದ ವಿಚಾರಕ್ಕೆ ಮನಸ್ತಾಪ ಆರಂಭವಾಗಿತ್ತು. ಇದರ ಪರಿಣಾಮ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆಯುವಂತಾಗಿದೆ ಎನ್ನಲಾಗಿದೆ.
40 ಜನರ ಮೇಲೆ ಪ್ರಕರಣ ದಾಖಲು: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ಗುಂಪುಗಳ ಮಧ್ಯೆ 40 ಜನರ ಮೇಲೆ ಶಾಂತಿ ಕದಡುವ ಕಾರಣಕ್ಕೆ ಸ್ವಯಂ ಪ್ರಕರಣ ದಾಖಲು ಮಾಡಿಕೊಂಡಿರುವ ಬನಹಟ್ಟಿ ಪೊಲೀಸ್ ಠಾಣೆಯು ಪ್ರಕರಣದ ಕುರಿತು ಅತ್ಯಂತ ಸೂಕ್ಷ್ಮವಾಗಿ ಹೆಜ್ಜೆಯಿಡುತ್ತಿದೆ.
ಪಿಎಸ್‌ಐ ಶಾಂತಾ ಹಳ್ಳಿ ಸೇರಿದಂತೆ ಪೊಲೀಸ್ ತಂಡ ಹೊಸೂರಿನಲ್ಲಿಯೇ ಬಿಡಾರ ಹೂಡಿದ್ದು, ಶಾಂತಿ ಭಂಗ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ಯಥಾಸ್ಥಿತಿಯಲ್ಲಿದ್ದು, ಎಂದಿನಂತೆ ದೈನಂದಿನ ಕೆಲಸ ಕಾರ್ಯಗಳಲ್ಲಿ ನಾಗರಿಕರಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 