ಜಿಲ್ಲಾಡಳಿತದಿಂದ ಅರ್ಥಪೂರ್ಣ ಹಜರತ್ ಟಿಪ್ಪು ಸುಲ್ತಾನ್ ಜಯಂತಿಗೆ ನಿಧರ್ಾರ

ಲೋಕದರ್ಶನ ವರದಿ

    ವಿಜಯಪುರ: 03-  ಜಿಲ್ಲಾಡಳಿತದ ವತಿಯಿಂದ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಅವರ ಜಯಂತಿಯನ್ನು ಇದೇ ನವೆಂಬರ್ 10ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ಅವರ ಅಧ್ಯಕ್ಷತೆಯಲ್ಲಿಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಟಿಪ್ಪು ಸುಲ್ತಾನ್ ಅವರ ಜಯಂತಿ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ಹಮ್ಮಿಕೊಳ್ಳಲು ಸಮುದಾಯದ ಮುಖಂಡರಿಂದ ಬೇಡಿಕೆ ಬಂದ ಹಿನ್ನಲೆಯಲ್ಲಿ ಈ ಕುರಿತಂತೆ ಸಕರ್ಾರದಿಂದ ಬರುವ ನಿದರ್ೇಶನ ಹಾಗೂ ಪೋಲಿಸ್ ಇಲಾಖೆಯ ನಿರಪೇಕ್ಷಣಾ ಪ್ರಮಾಣ ಪತ್ರದ ಆಧಾರದ ಮೇಲೆ ಶಾಂತಿಯುತವಾಗಿ ಮೆರವಣಿಗೆ ಏರ್ಪಡಿಸುವ ಕುರಿತಂತೆ ಸಹಾನುಭೂತಿಯಿಂದ ಪರಿಶೀಲಿಸುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು, ಸಕರ್ಾರವು ನಿದರ್ೇಶನ ನೀಡುವ ದಿನಾಂಕದಂತೆ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದು ಹೇಳಿದರು. 

ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಸ್ಮಾರಕಕ್ಕೆ ಗೌರವ ಅಪರ್ಿಸಲು ಉದ್ದೇಶಿಸಲಾಗಿದೆ. ಅದರಂತೆ ಬೆಳಿಗ್ಗೆ 10-30ಕ್ಕೆ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಮುಖ್ಯ ಕಾರ್ಯಕ್ರಮ ಏರ್ಪಡಿಸಲು ಉದ್ದೇಶಿಸಲಾಗಿದ್ದು, ವೇದಿಕೆಯ ಸಂಪೂರ್ಣ ಜವಾಬ್ದಾರಿ ಸಮುದಾಯದ ಮುಖಂಡರೇ ವಹಿಸಿಕೊಂಡಿರುವುದರಿಂದ ಈ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮುಖ್ಯ ಕಾರ್ಯಕ್ರಮ ಸಂದರ್ಭದಲ್ಲಿ ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲಾಗುವುದು. ನುರಿತ ಉಪನ್ಯಾಸಕರನ್ನು ಆಹ್ವಾನಿಸಲಾಗುವುದು. ಪ್ರತಿಭಾನ್ವಿತ ವಿದ್ಯಾಥರ್ಿಗಳ ಸನ್ಮಾನ ಹಾಗೂ ಬಹುಮಾನ ನೀಡಲು ನಿರ್ಧರಿಸಲಾಯಿತು. 

ಅಂದು ನಗರದ ಎಲ್ಲ ವೃತ್ತಗಳಗಳನ್ನು ಅಲಂಕರಿಸುವುದು, ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು. ಅಂದು ಸಂಜೆ 5 ಗಂಟೆಗೆ ಮುಖ್ಯ ವೇದಿಕೆಯಲ್ಲಿ ಸಮುದಾಯದ ಮೂಲಕ ಮುಷಾಯಿರಾ ಹಾಗೂ ಕವ್ವಾಲಿ ಏರ್ಪಡಿಸಲು ನಿರ್ಧರಿಸಲಾಯಿತು. ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮತ್ತು ಎಲ್ಲ ಸಮುದಾಯದ ಸಹಕಾರದೊಂದಿಗೆ ಆಚರಿಸಲು ನಿರ್ಧರಿಸಲಾಯಿತು. 

ಸಭೆಯಲ್ಲಿ ಡಿವೈಎಸ್ಪಿ ಡಿ. ಅಶೋಕ ಸಮಾಜದ ಮುಖಂಡರಾದ ಎಲ್.ಎಲ್.ಉಸ್ತಾದ, ಹಮೀದ ಮುಶ್ರೀಫ್, ಅಸ್ಲಂ ಸರ್, ಅಬ್ದುಲರಜಾಕ ಹೊತರ್ಿ, ಎಂ.ಸಿ. ಮುಲ್ಲಾ, ಮೈನು ಬೀಳಗಿ, ನಾಗರಾಜ ಲಂಬು, ರಫೀಕ ಟಪಾಲ್, ಬಂದೇನವಾಜ ಮಹಾಬರಿ, ಅಡಿವೆಪ್ಪ ಸಾಲಗಲ್, ಅಭಿಷೇಕ ಚಕ್ರವತರ್ಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕಿ ಎಚ್.ಬಿ.ವಿದ್ಯಾವತಿ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.