ತಂಬಾಕು ಸೇವನೆ ದುಷ್ಪರಿಣಾಮ: ವಿದ್ಯಾಥರ್ಿಗಳಿಗೆ ಜಾಗೃತಿ
ಹಾವೇರಿ05:ವಿಶ್ವ ಕ್ಯಾನ್ಸರ್ ವಿರೋಧಿ ದಿನಾಚರಣೆ ಅಂಗವಾಗಿ ಹಾನಗಲ್ ತಾಲೂಕು ಅಕ್ಕಿಆಲೂರ ಸಕರ್ಾರಿ ಪ್ರಥಮ ದಜರ್ೆ ಕಾಲೇಜಿನಲ್ಲಿ ವಿದ್ಯಾಥರ್ಿಗಳಿಗೆ ಹಾಗೂ ಮತ್ತು ಉಪನ್ಯಾಸಕರಿಗೆ ಸೋಮವಾರ ತಂಬಾಕು ಸೇವನೆಯ ದುಷ್ಪರಿಣಾಮಗಳ ಹಾಗೂ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಶಿಕ್ಷಣವನ್ನು ನೀಡಲಾಯಿತು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಮತ್ತು ಕೋಟ್ಪಾ ಕಾಯ್ದೆ-2003ರ ಕುರಿತು ಮತ್ತು ರಾಷ್ಟ್ರೀಯ ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿತ ಹಾಗೂ ಪಾಶ್ರ್ವವಾಯು ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದಡಿ ಜಾಗೃತಿ ಮೂಡಿಸಲಾಯಿತು.
ಸಮಾರಂಭದಲ್ಲಿ ಡಾ.ಆಸಿಫ್ ಶೇಕ್ ಅವರು ಮಾತನಾಡಿ, ಭಾರತ ದೇಶದಲ್ಲಿ ಗರ್ಭಕಂಠದ ಕ್ಯಾನ್ಸರನಿಂದ ಪ್ರತಿ ಎಂಟು ನಿಮಿಷಕ್ಕೆ ಒಬ್ಬ ಮಹಿಳೆ ಸಾವನ್ನಪ್ಪುತ್ತಿದ್ದಾಳೆ ಹಾಗೂ ಪ್ರತಿ ವರ್ಷ ಪತ್ತೆಹಚ್ಚಲಾದ ಎರಡು ಸ್ತನ ಕ್ಯಾನ್ಸರ್ ಪ್ರಕರಣದಲ್ಲಿ ಒಬ್ಬರು ಸಾವನ್ನಪ್ಪುತ್ತಿದ್ದಾರೆ. ತಂಬಾಕು ಸೇವನೆ ಸಂಬಂಧಿ ಕಾಯಿಲೆಯಿಂದ ಪ್ರತಿದಿನ 2500 ರಷ್ಟು ಜನರು ಮರಣಹೊಂದುತ್ತಿದ್ದಾರೆ.
ಕ್ಯಾನ್ಸರ್ನಿಂದಾಗುವ ಒಟ್ಟಾರೆ ಮರಣಗಳಲ್ಲಿ ಬಾಯಿ ಮತ್ತು ಶಾಸ್ವಕೋಶದ ಕ್ಯಾನ್ಸರ್ನಿಂದ ಶೇ.25 ರಷ್ಟು ಗಂಡಸರು ಹಾಗೂ ಸ್ತನಕ್ಯಾನ್ಸರ್ ಹಾಗೂ ಬಾಯಿ ಕ್ಯಾನ್ಸರ್ನಿಂದ ಶೇ.25 ರಷ್ಟು ಮಹಿಳೆಯರು ಮರಣಹೊಂದುತ್ತಿದ್ದಾರೆ.
ತಂಬಾಕು ಸೇವನೆ ಅತ್ಯಂತ ಅಪಾಯಕಾರಿಯಾಗಿದೆ. ಶಾಲಾ ಆವರಣದಿಂದ 100 ಮೀಟರ್ ಅಂತರದೊಳಗೆ ತಂಬಾಕು ಮಾರಾಟ ಶಿಕ್ಷಾರ್ಹ ಅಪರಾಧವಾಗಿದೆ. ಈ ಕುರಿತಂತೆ ಎಲ್ಲರೂ ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಚಾರ್ಯ ಡಾ.ಮಲ್ಲಿಕಾಜರ್ುನ ಕಡ್ಡಿಪುಡಿ ವಹಿಸಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 