ಇಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಜಿಲ್ಲೆಗೆ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಭೇಟಿ: ಪೂರ್ವಭಾವಿ ಸಿದ್ಧತೆ ಪರೀಶೀಲನೆ
Today, Chief Minister, Deputy Chief Minister, District Collector Dr. Ananda K visit: Pre-preparatio
ಇಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಜಿಲ್ಲೆಗೆ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಭೇಟಿ: ಪೂರ್ವಭಾವಿ ಸಿದ್ಧತೆ ಪರೀಶೀಲನೆ
ವಿಜಯಪುರ 13: ಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರೆ್ಣ ಕಾರ್ಯಕ್ರಮಕ್ಕೆ ಜುಲೈ 14 ರಂದು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ 13ರ ಭಾನುವಾರ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರೀಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.
ಸಿದ್ಧತೆಗಳ ಪರೀಶೀಲನೆ ನಡೆಸಿದ ಅವರು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಭದ್ರತಾ ವ್ಯವಸ್ಥೆ,ವೇದಿಕೆ ವ್ಯವಸ್ಥೆ, ಉದ್ಘಾಟನೆಗೊಳ್ಳಲಿರುವ ಬೃಹತ್ ವಾಣಿಜ್ಯ ಸಂಕೀರ್ಣ ಸ್ಥಳ ಕುರಿತು ಪರೀಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ,ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ,ಇಂಡಿ ಡಿವೈಎಸ್ಪಿ ಜಗದೀಶ,ಇಂಡಿ ತಹಶೀಲ್ದಾರರಾದ ಬಿ.ಎಸ್.ಖಡಕ್ ಭಾವಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಚಿವ ಡಾ.ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
ವಿಜಯಪುರ 13: ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಜುಲೈ 14ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಂದು ಬೆಳಿಗ್ಗೆ 12-50ಕ್ಕೆ ವಿಜಯಪುರ ಜಿಲ್ಲೆಯ ಇಂಡಿಗೆ ಆಗಮಿಸಿ, ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮಧ್ಯಾಹ್ನ 4-30ಕ್ಕೆ ಇಂಡಿಯಿಂದ ಸೋಲಾಪುರ ಮಾರ್ಗವಾಗಿ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 