ಇಂದು ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ
ಕೊಪ್ಪಳ ಜನವರಿ 24 : ವಸತಿ, ವಕ್ಪ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರು ಜನವರಿ 26 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.ಸಚಿವರು ಅಂದು ಬೆಳಿಗ್ಗೆ 11.30 ಗಂಟೆಗೆ ಹೊಸಪೇಟೆಯಿಂದ ರಸ್ತೆ ಮೂಲಕ ನಿರ್ಗಮಿಸಿ, ಮಧ್ಯಾಹ್ನ 12 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಕಾರ್ಯನಿರತ ಪತ್ರಕರ್ತರಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರ ಶಾಸಕರು ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು. ನಂತರ ಅಂದು ಮಧ್ಯಾಹ್ನ 3 ಗಂಟೆಗೆ ಕೊಪ್ಪಳದಿಂದ ರಸ್ತೆ ಮೂಲಕ ಹೊಸಪೇಟೆಗೆ ಪ್ರಯಾಣ ಬೆಳಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.