ಇಂದು ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ

Today is Jagadguru Renukacharya's Jayanti celebration

ಇಂದು ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ  

ತಾಳಿಕೋಟಿ 11: ಪಟ್ಟಣದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಅಂಗವಾಗಿ ಇಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.  ಜಯಂತಿ ಅಂಗವಾಗಿ ಇಂದು ಮುಂಜಾನೆ 8ಘಂಟೆಗೆ ಪಟ್ಟಣದ ಖಾಸ್ಗತೇಶ್ವರ ಮಠದಿಂದ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರದ ಭವ್ಯ ಮೆರವಣಿಗೆ ಸಕಲ ವಾದ್ಯ ಮೇಳಗಳೊಂದಿಗೆ ನಡೆಯಲಿದೆ. ಮೆರವಣಿಗೆಯು ಖಾಸ್ಗತೇಶ್ವರ ಮಠದಿಂದ ಆರಂಭವಾಗಿ ಕತ್ರಿಬಜಾರಿ​‍್ಶವಾಜಿ ಸರ್ಕಲ್, ವಿಠ್ಠಲ ಮಂದಿರ, ಮಹಾರಾಣಾ ಪ್ರತಾಪ್ ಸಿಂಹ ಸರ್ಕಲ್, ಬಸ್ ನಿಲ್ದಾಣ ಮಾರ್ಗವಾಗಿ ಅಡತ್ ಮರ್ಚೆಂಟ್ ಅಸೋಸಿಯೇಷನ್ ಸಭಾ ಭವನಕ್ಕೆ ತಲುಪಿ ಅಲ್ಲಿ ಸಭೆಯಾಗಿ ಮಾರ​‍್ಾಡುವುದು.  ಅಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ನಾಡಿನ ಹರ ಚರ ಗುರು ಮೂರ್ತಿಗಳು ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ. ಈ ಎಲ್ಲ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ರಾಷ್ಟ್ರೀಯ ಬೇಡ ಜಂಗಮ ಸಮಾಜದ ಗೌರವ ಅಧ್ಯಕ್ಷ ರಾಮಲಿಂಗಯ್ಯ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.