ಇಂದು ಕೊಪ್ಪಳದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

Today is National Voter's Day in Koppa

ಇಂದು ಕೊಪ್ಪಳದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ 

ಕೊಪ್ಪಳ  24:  ಭಾರತ ಚುನಾವಣಾ ಆಯೋಗ, ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು, ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ-2025 ಕಾರ್ಯಕ್ರಮವನ್ನು ಜನವರಿ 25 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಏರಿ​‍್ಡಸಲಾಗಿದೆ. 

ಕೊಪ್ಪಳ ಪೋಕ್ಸೋ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಂತೇಶ ಎಸ್ ದರಗದ, ಅಪರ ಜಿಲ್ಲಾಧಿಕಾರಿಗಳು ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಪಾಲ್ಗೊಳ್ಳುವರು.  

ಕಾರ್ಯಕ್ರಮದಲ್ಲಿ ಕೊಪ್ಪಳ ಉಪವಿಭಾಗಾಧಿಕಾರಿಗಳು ಹಾಗೂ ಮತದಾರರ ನೋಂದಣಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿ.ಪಂ ಯೋಜನಾ ನಿರ್ದೇಶಕ ಪ್ರಕಾಶ ವಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.