ಇಂದು ಪತ್ರಿಕಾ ದಿನಾಚರಣೆ : ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ

ಇಂದು ಪತ್ರಿಕಾ ದಿನಾಚರಣೆ :  ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ Today is Press Day: Children's Talent Award Ceremony

ಇಂದು ಪತ್ರಿಕಾ ದಿನಾಚರಣೆ :  ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ

ಕೊಪ್ಪಳ ಅಗಸ್ಟ್‌ 8, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹ ಇದೇ ದಿ, 9 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಪತ್ರಿಕಾ ದಿನಾಚರಣೆ ದತ್ತಿ ನಿಧಿ ಸೇರಿ ಅತ್ಯುತ್ತಮ ವರದಿಗಾರ ಪ್ರಶಸ್ತಿ ಪ್ರಧಾನ ಜೊತೆಗೆ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಲಿದೆ.ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ, ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಮುಖ್ಯಮಂತ್ರಿಗಳ ಮಾಧ್ಯಮ ಸಲೆಗಾರ ಕೆ ,ವಿ, ಪ್ರಭಾಕರ್ ,ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗುಡೂರ್, ಸಂಸದ ಕೆ ರಾಜಶೇಖರ ಹಿಟ್ನಾಳ್ ,ಹಾಲು ಉತ್ಪಾದಕರ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಕೆ ರಾಘವೇಂದ್ರ ಹಿಟ್ನಾಳ್, ಶಾಸಕ ಗಾಲಿ ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯ ರಾದ ಹೇಮಲತಾ ನಾಯಕ್ ಅಲ್ಲದೆ ಕುಲಪತಿ ಡಾ. ಬಿಕೆ ರವಿ ,ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್, ಪ್ರಾಧಿಕಾರದ ಅಧ್ಯಕ್ಷ ಕೆ ಶ್ರೀನಿವಾಸ ಗುಪ್ತ, ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ, ಜಿಲ್ಲಾ ಪಂಚಾಯಿತಿಯ ಸಿಇಓ ವರ್ಣಿತ ತೇಗಿ ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಅರಸಿದ್ದಿ, ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಡೊಳ್ಳಿನ್, ಮಾಜಿ ಸಂಸದ ಸಂಗಣ್ಣ ಕರಡಿ , ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ, ಮಾಜಿ ಶಾಸಕ ಬಸವರಾಜ್ ಧಡೆಸುಗೂರು,ಜೆಡಿಎಸ್ ಮುಖಂಡ ಸಿ,ವಿ, ಚಂದ್ರಶೇಖರ್, ಬಿಜೆಪಿ ಮುಖಂಡ ಡಾ, ಬಸವರಾಜ್ ಕ್ಯಾವಟರ್ ,ಜಿಲ್ಲಾ ವಾರ್ತಾಧಿಕಾರಿ ಸುರೇಶ್, ಜಿ ,ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ,ಸಿ, ಲೋಕೇಶ್ ,ಸಂಘದ ರಾಜ್ಯ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸೋಮಶೇಖರ ಕೆರಗೋಡು ,  ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಾಬ್ ಗೌಡರ್ ಸ್ಥಳೀಯ ನಗರಸಭಾ ಸದಸ್ಯ ಅರುಣ್ ಕುಮಾರ್ ಅಪ್ಪು ಶೆಟ್ಟಿ ,ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ್ ಜುಮ್ಮಣ್ಣವರ್ ,ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯ ಎಂ ಸಾಧಿಕ್ ಅಲಿ ,ವಿಶೇಷ ಆಹ್ವಾನಿತ ರಾಜ್ಯ ಸದಸ್ಯ ಎಚ್,ಎಸ್ ,ಹರೀಶ್, ರಾಷ್ಟ್ರೀಯ ಮಂಡಳಿ ಸದಸ್ಯ ಜಿ,ಎಸ್ ,ಗೋನಾಳ ,ಸಂಘದ ಗೌರವಾಧ್ಯಕ್ಷ ಬಸವರಾಜ್ ಗುಡ್ಲಾನೂರ್, ಪತ್ರಿಕಾ ಭವನ ಕಟ್ಟಡ ಸಮಿತಿ ಅಧ್ಯಕ್ಷ ಎನ್,ಎಂ, ದೊಡ್ಡಮನಿ ,ಸೇರಿದಂತೆ ಸಂಘದ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ತಾಲೂಕಿನ ಎಲ್ಲಾ ಪದಾಧಿಕಾರಿಗಳು ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ, ನಮ್ಮ ಸಂಘದ ಜಿಲ್ಲಾ ಅಧ್ಯಕ್ಷರಾದ ಹನುಮಂತ ಹಳ್ಳಿಕೇರಿ ಅವರು ಸಮಾರಂಭದ ಅಧ್ಯಕ್ಷತೆ ಮತ್ತು ನೇತೃತ್ವ ವಹಿಸಲಿದ್ದು ಸರ್ವರು ಸದರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು  ಯಶಸ್ವಿಗೊಳಿಸಬೇಕೆಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ ನಾಗರಾಜ ,ಖಜಾಂಚಿ ರಾಜು ,ಬಿ, ಆರ್ ,ಮತ್ತು ಜಿಲ್ಲಾ ಕೇಂದ್ರ ಸ್ಥಾನದ ಉಪಾಧ್ಯಕ್ಷ ರುದ್ರಗೌಡ ಪಾಟೀಲ್, ಜಿಲ್ಲಾ ಕೇಂದ್ರ ಸ್ಥಾನದ ಕಾರ್ಯದರ್ಶಿ ಈರಣ್ಣ ಕಳ್ಳಿಮನಿ ,ರವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ,