ಇಂದು ಆರೇಂಜ್ ದಿ ವಲ್ಡ್ ಮಹಿಳಾ ಪಥ ಸಂಚಲನ
Today is the Orange the World Mahila Patha Sanchalana
ರಾಣಿಬೆನ್ನೂರು 02: ಮಹಿಳೆಯರು ಎಲ್ಲ ರಂಗದಲ್ಲಿಯೂ ಸಬಲರಾಗಿದ್ದರೂ ಕೂಡಾ ಇನ್ನೂ ಶೋಷಣೆಗಳು ಜೀವಂತವಾಗಿವೆ. ಅವರ ಮೇಲಿನ ಶೋಷಣೆ ತಡೆಯುವ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ಇನ್ನರ್ ವ್ಹೀಲ್ ಸಂಸ್ಥೆ ಮತ್ತು ವಿವಿಧ ಸಂಘ, ಸಂಸ್ಥೆಗಳು, ಮಹಿಳಾ ಸಂಘಟನೆಗಳ ವತಿಯಿಂದ ನಗರದಲ್ಲಿ ಡಿ.3ರಂದು ಆರೇಂಜ್ ದಿ ವಲ್ಡ್ ಮಹಿಳಾ ಪಥ ಸಂಚಲನ ಹಮ್ಮಿಕೊಳ್ಳಲಾಗಿದೆ ಎಂದು ಇನ್ನರ್ ವ್ಹೀಲ್ ಸಂಸ್ಥೆ ಅಧ್ಯಕ್ಷೆ ದೀಪಾಲಿ ಪುನೀತ್ ಹೇಳಿದರು.
ನಗರದ ಕಾಕಿ ಜನಸೇವಾ ಸಂಸ್ಥೆಯ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ಅಂಗವಾಗಿ ಡಿ.3ರಂದು ಬೆಳಗ್ಗೆ 8.30ಕ್ಕೆ ನಗರದ ಮುನ್ಸಿಪಲ್ ಮೈದಾನ ಬಳಿಯಿಂದ ಹೊರಡಲಿರುವ ಪಥ ಸಂಚಲನವು ಕುರಬಗೇರಿ ಕ್ರಾಸ್, ದುರ್ಗಾ ಸರ್ಕಲ್, ಎಂ.ಜಿ.ರಸ್ತೆ, ಪೊಸ್ಟ್ ಸರ್ಕಲ್ ಮಾರ್ಗವಾಗಿ ಅಶೋಕ ಸರ್ಕಲ್‌ಗೆ ಬಂದು ಸೇರಲಿದೆ. ಇದರಲ್ಲಿ ಶಾಸಕ ಪ್ರಕಾಶ ಕೋಳಿವಾಡ ದಂಪತಿ, ಮಾಜಿ ಶಾಸಕ ಅರುಣಕುಮಾರ ಪೂಜಾರ ದಂಪತಿ ಹಾಗೂ ನಗರದ ವಿವಿಧ ಸಂಘ, ಸಂಸ್ಥೆಗಳು, ಮಹಿಳಾ ಸಂಘಟನೆಗಳು ಪಾಲ್ಗೊಳ್ಳಲಿವೆ ಎಂದರು. ಪುಷ್ಪಾ ಮಾಳಗಿ, ಸುಮಾ ಹೊಟ್ಟಿಗೌಡ್ರ, ಲಕ್ಷ್ಮೀ ಕಾಕಿ, ರೂಪಾ ಕಾಕಿ, ಶಿಲ್ಪಾ ಸಾವಕಾರ, ಸಂಜನಾ ಕುರುವತ್ತಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 