ನಾಳೆ ಡಾ.ರಾಜಕುಮಾರ ಜನ್ಮದಿನಾಚರಣೆ

ಧಾರವಾಡ.22: ಜಿಲ್ಲಾಡಳಿತ ಹಾಗೂ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕನ್ನಡದ ವರನಟ ಡಾ.ರಾಜ್ಕುಮಾರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಏಪ್ರಿಲ್ 24 ರಂದು ಬೆಳಿಗ್ಗೆ 9-30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. 

      ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಡಾ.ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸುವರು. ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿರಲು ಕೋರಲಾಗಿದೆ.