ನಾಳೆ ಉರ್ದು ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಹಾಗೂ ಕಲಾತ್ಸವ

ಕಲಾತ್ಸವ ಕಾರ್ಯಕ್ರಮ

ನಾಳೆ ಉರ್ದು ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಹಾಗೂ ಕಲಾತ್ಸವ  

ಕೊಪ್ಪಳ 25: ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಚೇರಿ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿ 27ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಸರ್ದಾರಗಲ್ಲಿ ಆವರಣದಲ್ಲಿ ಕೊಪ್ಪಳ ತಾಲೂಕ ಮಟ್ಟದ ಉರ್ದು ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಮತ್ತು ಕಲಾತ್ಸವ 2024 ಕಾರ್ಯಕ್ರಮ ಜರುಗಲಿದೆಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರ ತಂದು ಅದಕ್ಕೆ ಪ್ರೋತ್ಸಾಹಿಸುವ ಸದ್ದುದ್ದೇಶದಿಂದ ಈ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಜರುಗಲಿದೆ. ಸದರಿ ಕಾರ್ಯಕ್ರಮದಲ್ಲಿ  ಶಿಕ್ಷಣ ಮತ್ತು ಸಾಕ್ಷಾತಾ ಇಲಾಖೆಯ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ತಾಲೂಕಿನ ವಿವಿಧ ಉರ್ದು ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ತಾಲೂಕ ಉರ್ದು ಸಿ ಆರ್ ಪಿ ಮೈನುದ್ದೀನ್ ಅತ್ತಾರ್ ತಿಳಿಸಿದ್ದಾರೆ.